ಮೈಸೂರು: ಇಂದು ಬೆಳ್ಳಂ ಬೆಳಿಗ್ಗೆ ಭ್ರಷ್ಟಚಾರ ನಿಗ್ರಹ ದಳದ ಅಧಿಕಾರಿಗಳು ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಅವರಿಗೆ ಶಾಕ್ ನೀಡಿದ್ದಾರೆ. ಬೆಳ್ಳಂಬೆಳಿಗ್ಗೆ ಎಸಿಎಫ್ ಶಿವಶಂಕರ್ ಅವರ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಶಿವಶಂಕರ್ ಅವರ ಮನೆಯಲ್ಲಿ ಶೋಧ ನಡೆಸಿದ್ದು, ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪ ಕೇಳಿ ಬಂದಿದೆ. ಮೈಸೂರು ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಶಂಕರ್ ಅವರ ಮನೆ ಸೇರಿ ಏಕ ಕಾಲದಲ್ಲಿ 5 ಕಡೆ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ನಜರ್ ಬಾದ್, ಸರಸ್ವತಿಪುರಂ, ಜೆ ಸಿ ಬಡಾವಣೆ, ಮಳವಳ್ಳಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.