News Kannada
Wednesday, February 08 2023

ಮೈಸೂರು

ಪುರಸಭೆ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

Photo Credit :

ಪುರಸಭೆ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ಮೈಸೂರು: ಇಲ್ಲಿಗೆ ಸಮೀಪದ ಬನ್ನೂರು ಪುರಸಭೆ ಮುಖ್ಯಾಧಿಕಾರಿ ಲಂಚ ಪಡೆಯುತ್ತಿದ್ದ ವೇಳೆಯೇ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ತಿ.ನರಸೀಪುರ ತಾಲೂಕಿನ ಬನ್ನೂರು ಪುರಸಭೆಯ ಮುಖ್ಯಾಧಿಕಾರಿ ಪುಷ್ಪಲತಾ ಅವರು ಬುಧವಾರ ಗುತ್ತಿಗೆದಾರರೊಬ್ಬರಿಂದ ಲಂಚಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಅವರನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ.

ಪಟ್ಟಣದಲ್ಲಿ ನಡೆಸಿದ್ದ ಕಾಮಗಾರಿಯೊಂದರ ಬಾಬ್ತು 13 ಲಕ್ಷ ರೂ. ಬಿಲ್ ಮಂಜೂರು ಮಾಡಲು ಶೇ.3ರಂತೆ ಲಂಚ ಕೇಳಿದ್ದರು. ಆದರೆ ಗುತ್ತಿಗೆದಾರ ಆನಂದ್ ಭೋವಿ ಅವರಿಗೆ ಗುತ್ತಿಗೆಯಲ್ಲಿ ನಷ್ಟವಾಗಿದ್ದ ಕಾರಣ ಅವರು ಎಸಿಬಿಗೆ ದೂರು ನೀಡಿದ್ದರು. ಅದರಂತೆ ಮೊದಲ ಕಂತಾಗಿ 25 ಸಾವಿರ ರೂ. ಲಂಚದ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪುಷ್ಪಲತಾ ಅವರನ್ನು ಬಂಧಿಸಿ 25 ಸಾವಿರ ರೂ.ಗಳನ್ನು ವಶಕ್ಕೆ ಪಡೆದರು.

ಇದೇ ಅಲ್ಲದೇ ಪುಷ್ಪಲತಾ ಅವರು ಸಣ್ಣಪುಟ್ಟ ಕೆಲಸಗಳಿಗೂ ಲಂಚ ಪಡೆಯುತಿದ್ದರು ಎಂದು ಪುರಸಭೆಯ ಸದಸ್ಯರೇ ಆರೋಪ ಮಾಡಿದ್ದಾರೆ. ಪುಷ್ಪಲತಾ ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸಿಬಿ ಅಧಿಕಾರಿಗಳು ಮುಂದಿನ ತನಿಖೆ ನಡೆಸುತ್ತಿದ್ದಾರೆ.

See also  ಮಂಡ್ಯದಲ್ಲಿ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು