ಮೈಸೂರು: ಜನವರಿ 1 ರಿಂದ ಚಾಮುಂಡಿಬೆಟ್ಟಕ್ಕೆ ಪ್ರವೇಶವನ್ನು ನಿಷೇಧಿಸುವಂತೆ ಮೈಸೂರು ಜಿಲ್ಲಾಡಳಿತ ತಿಳಿಸಿದೆ. ರಾಜ್ಯದಲ್ಲಿ ಮೂವರಿಗೆ ರೂಪಾಂತರದ ಹೊಂದಿರುವ ಕರೋನವೈರಸ್ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಅಂತರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಹೊಸವರ್ಷದ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಾರೆ. ಆದರೆ ಈ ವರ್ಷ ಕೋರೋಣ ಸಾಂಕ್ರಾಮಿಕ ಹಿನ್ನೆಲೆಯಲ್ಲಿಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಜನವರಿ ಒಂದರಿಂದ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.