ಮೈಸೂರು: ವರುಣಾ ಕ್ಷೇತ್ರಕ್ಕೆ ಸೇರುವ ಹದಿನಾರು ಗ್ರಾಮದ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಂಥಾಲಯದಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ವಿಶೇಷ ಕಾರ್ಯಕ್ರಮದಡಿಯಲ್ಲಿ 6 ವರ್ಷದಿಂದ 18 ವರ್ಷದೊಳಗಿನ ಎಲ್ಲ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಓದುವ ಬೆಳಕು ಕಾರ್ಯಕ್ರಮವನ್ನು ನಡೆಸಲಾಯಿತು.
ಕೋವಿಡ್ 19ರ ಸಂದರ್ಭದಲ್ಲಿ ಶಿಕ್ಷಣ ಕಲಿಕೆಯಲ್ಲಿ ಶಾಲೆಗಳು ಪ್ರಾರಂಭವಾಗದೆ, ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದೆ ಉಳಿಯುವ ಪರಿಸ್ಥಿತಿ ಬಂದಿತ್ತು, ಇದಕ್ಕೆ ಪೂರಕವಾಗಿ ಗ್ರಾ.ಪಂ. ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮಕ್ಕಳಿಗೆ ಪೂರಕವಾಗಿದ್ದು, ಮಕ್ಕಳು ಅಧ್ಯಯನದಲ್ಲಿ ನಿರತವಾಗಿರುವುದು ಪೋಷಕರುಗಳಿಗೂ ನೆಮ್ಮದಿ ನಿಟ್ಟುಸಿರು ಬಿಡಲು ಕಾರಣವಾಗಿದೆ. ಮಕ್ಕಳು ಇನ್ನೂ ಹೆಚ್ಚು ಓದುವುದರಲ್ಲಿ ತೊಡಗಿಸಿಕೊಳ್ಳಬೇಕು ಎಂದು ಗ್ರಾಮಸ್ಥರು ತಿಳಿಸಿದರು.
ಇದೇ ವೇಳೆ ಗ್ರಾಮಸ್ಥರು ಮಾತನಾಡಿ ಶಾಲೆಗಳಂತೆ ಗ್ರಂಥಾಲಯದ ಸಮಯವನ್ನು 8ಕ್ಕೆ ಹೆಚ್ಚಿಸಲು ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಬೇಕು ಎಂದು ಮನವಿ ಮಾಡಿದರು.