News Kannada
Sunday, January 29 2023

ಮೈಸೂರು

ಸಾಂಸ್ಕೃತಿಕ ನಗರಿಯಲ್ಲಿ ನಿಷೇಧಾಜ್ಞೆ ಜಾರಿ

Photo Credit :

ಸಾಂಸ್ಕೃತಿಕ ನಗರಿಯಲ್ಲಿ ನಿಷೇಧಾಜ್ಞೆ ಜಾರಿ

ಮೈಸೂರು: ಮೈಸೂರು ನಗರ ವ್ಯಾಪ್ತಿಯಲ್ಲಿ ಕೋವಿಡ್-19 ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಹಾಗೂ ಹೊರದೇಶದಗಳಲ್ಲಿ ಹೊಸ ರೂಪಾಂತರ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟಲು ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೊಳಿಸುವುದು ಅತ್ಯವಶ್ಯಕವಾಗಿದ್ದು ಹೊಸ ವರ್ಷಾಚರಣೆ ಸಂದರ್ಭ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ ಡಿ.31 ರ ಸಂಜೆ 6ಗಂಟೆಯಿಂದ ಜ.1ರ ಬೆಳಿಗ್ಗೆ 6ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ರಸ್ತೆಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದು ಹಾಗೂ ಮೈಸೂರು ನಗರದ ಯಾವುದೇ ರಸ್ತೆಗಳಲ್ಲಿ ಮತ್ತು ತೆರೆದ ಜಾಗಗಳಲ್ಲಿ /ಪಾರ್ಕ್ ಗಳಲ್ಲಿ/ಮೈದಾನಗಳಲ್ಲಿ ಗುಂಪು ಸೇರಿ ಹೊಸ ವರ್ಷಾಚಷರಣೆ ಆಚರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಹೋಟೆಲ್ ಗಳು, ಮಾಲ್ ಗಳು, ರೆಸ್ಟೋರೆಂಟ್ ಗಳು, ಕ್ಲಬ್, ಪಬ್, ಕ್ಲಬ್ ಹೌಸ್, ಅಥವಾ ಇದೇ ರೀತಿಯ ಯಾವುದೇ ತರಹದ ಮನರಂಜನಾ ಸ್ಥಳಗಳಲ್ಲಿ ಹೊಸ ವರ್ಷಾಚರಣೆ ಸಂಬಂಧ ಯಾವುದೇ ರೀತಿಯ ವಿಶೇಷ ಕಾರ್ಯಕ್ರಮಗಳು, ಮನೋರಂಜನಾ ಕೂಟಗಳು, ಡಿಜೆಗಳು, ಸಂಗೀತ ಸಂಜೆ /ಬ್ಯಾಂಡ್ ಮತ್ತು ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ಈ ಸ್ಥಳಗಳಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ವಯ ಯಾವುದೇ ಸಮಯದಲ್ಲಿ ಸಾಮರ್ಥ್ಯದ 50%ಮೀರದಂತೆ ಗ್ರಾಹಕರಿಗೆ ಅವಕಾಶ ಕಲ್ಪಿಸಿ ದೈನಂದಿನ ವ್ಯಾಪಾರ ಚಟುವಟಿಕೆಗಳನ್ನು ನಡೆಸಬಹುದಾಗಿದೆ.

ಹೋಟೆಲ್ ಗಳು ಮಾಲ್ ಗಳು,ರೆಸ್ಟೋರೆಂಟ್ ಗಳು, ಕ್ಲಬ್ ಗಳು, ಕ್ಲಬ್ ಹೌಸ್ ಆಡಳಿತ ಮಂಡಳಿಯವರು ಮುಂಗಡವಾಗಿ ಕಾಯ್ದಿರಿಸಿದ ಅತಿಥಿ/ಆಹ್ವಾನಿತರಿಗೆ ಮಾತ್ರ ಪ್ರವೇಶ ನೀಡುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮಳಿಗೆ/ಸಂಸ್ಥೆಯ ಹೊರಗೆ ಸಾರ್ವಜನಿಕರು ಪ್ರವೇಶಕ್ಕಾಗಿ ಗುಂಪು ಸೇರಿದಂತೆ ಆಡಳಿತ ಮಂಡಳಿಯವರು ಕ್ರಮ ವಹಿಸಬೇಕು. ಜಿಲ್ಲಾಡಳಿತ ಹೊರಡಿಸಿರುವ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು.

ಹೋಟೆಲ್ ಗಳು, ಮಾಲ್ ಗಳು, ರೆಸ್ಟೋರೆಂಟ್ ಗಳು, ಕ್ಲಬ್, ಪಬ್, ಮತ್ತು ಕ್ಲಬ್ ಹೌಸ್ ಇತ್ಯಾದಿ ವ್ಯಾಪಾರ ಮಳಿಗೆಗಳಲ್ಲಿ ಎಂದಿನಂತೆ ರಾತ್ರಿ 11.30ಕ್ಕೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಬೇಕು. ನಿಯಮ ಉಲ್ಲಂಘಿಸಿದ್ದು ಕಂಡು ಬಂದಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

See also  ರಾಷ್ಟ್ರೀಯ ಜಾಂಬೂರಿ ಉತ್ಸವ: ರಾಜಸ್ಥಾನ ತಂಡ ಪ್ರಥಮ, ಉತ್ತರಪ್ರದೇಶ ದ್ವಿತೀಯ...
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು