ಮೈಸೂರು: ಲಂಚ ಪಡೆಯುತ್ತಿದ್ದಾಗ ಭೂಮಾಪಕ ಅಧಿಕಾರಿ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಜಮೀನು ಸರ್ವೇ ಮಾಡಿಕೊಡಲು 8 ಸಾವಿರ ರೂಪಾಯಿ ಪಡೆಯುತ್ತಿದ್ದಾಗ ಮೈಸೂರು ತಾಲ್ಲೂಕು ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಭೂಮಾಪನಾ ಇಲಾಖೆಯ ಸರ್ವೆಯರ್ ಹನುಮಂತರಾಯಪ್ಪ ಅವರನ್ನು ವಶಕ್ಕೆ ಪಡೆದಿದ್ದಾರೆ.
ಅಧಿಕಾರಿ ಹನುಮಂತರಾಯಪ್ಪ ಜಮೀನು ಸರ್ವೇ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 10 ಸಾವಿರ ಲಂಚ ಕೇಳಿದ್ದರು ಎನ್ನಲಾಗಿದೆ. ಎಸಿಬಿ ಎಸ್ಪಿ ಡಾ.ಸುಮ್ ಡಿ ಪನೇಕರ್ ಮಾರ್ಗದರ್ಶನದಲ್ಲಿ ಡಿಎಸ್ಪಿ ಎಚ್.ಪರಶುರಾಮಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.