News Kannada
Thursday, October 06 2022

ಮೈಸೂರು

ಸಾರ್ವಜನಿಕರಿಗೆ ತೊಂದರೆಯಾಗುವ ಗಣಿಗಾರಿಕೆ ಬೇಡ - 1 min read

Photo Credit :

ಸಾರ್ವಜನಿಕರಿಗೆ ತೊಂದರೆಯಾಗುವ ಗಣಿಗಾರಿಕೆ ಬೇಡ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲುಗಣಿಗಾರಿಕೆಗಳನ್ನು ಸಕ್ರಮ ಮಾಡಲು ಸರ್ಕಾರ ನಿರ್ಧರಿಸಿದ್ದು, ಯಾವ ಗಣಿಗಾರಿಕೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆಯೋ ಅಂತಹವುಗಳಿಗೆ ಪರವಾನಗಿ ನೀಡಬಾರದು ಎಂದು ಕೆಪಿಸಿಸಿ ವಕ್ತಾರ ಎನ್. ಚಲುವರಾಯಸ್ವಾಮಿ ಆಗ್ರಹಿಸಿದ್ದಾರೆ.

ನಗರದ ಪಿಎಲ್‍ಡಿ ಬ್ಯಾಂಕ್‍ನ ನೂತನ ಕಟ್ಟಡಕ್ಕೆ ಮಂಗಳವಾರ ಭೇಟಿ ನೀಡಿದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ಪರವಾನಗಿ ಪಡೆಯದೆ, ರಾಜಧನವನ್ನು ಸರ್ಕಾರಕ್ಕೆ ನೀಡದೆ ಅಕ್ರಮವಾಗಿ ನಡೆಸುತ್ತಿದ್ದರೆ ಅಂತಹವುಗಳ ಬಗ್ಗೆ ಪರಾಮರ್ಶಿಸಿ, ಪರಿಸರ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ರಾಜಧನವನ್ನು ಕಟ್ಟಿಸಿಕೊಂಡು ನೀಡಲಿ. ಒಂದುವೇಳೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದರೆ ಪರವಾನಗಿ ನೀಡುವುದು ಸೂಕ್ತವಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ರೀತಿ ಮಾಡಲು ಹೊರಟಿದ್ದಾರೆ ಎನ್ನುವುದು ತಿಳಿದುಬಂದಿಲ್ಲ, ಅದನ್ನು ತಿಳಿದು ಮಾತನಾಡುವುದು ಸೂಕ್ತ ಎಂದು ಅವರು ಹೇಳಿದರು.

ಕೇಂದ್ರದ ಜನವಿರೋಧಿ ಬಜೆಟ್ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಲು ತೀರ್ಮಾನಿಸಿದ್ದು, ರಾಷ್ಟ್ರವ್ಯಾಪಿ ರೈತರೊಡಗೂಡಿ ಪ್ರತಿಭಟನೆ ನಡೆಸಲು ಉz್ದÉೀಶಿಸಲಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರು, ಕಾರ್ಮಿಕರು, ಯುವಜನತೆ ಹಾಗೂ ಮಹಿಳೆಯರಿಗೆ ಆದ್ಯತೆ ನೀಡಿಲ್ಲ. ಕೊರೊನಾದಿಂದ ನಲುಗಿರುವ ಬಡ ಮತ್ತು ಮಧ್ಯಮ ವರ್ಗದ ಜನತೆಯನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ ಎಂದು ದೂರಿದರು.

ಕೊರೊನಾದಿಂದಾಗಿ ಒಂದು ವರ್ಷದಿಂದ ಉದ್ಯೋಗ ಕಳೆದುಕೊಂಡಿರುವವರು, ರೈತರು ಹಾಗೂ  ಯುವಜನತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತುತ ಬಜೆಟ್‍ನಲ್ಲಿ ಕೇಂದ್ರ ಸರ್ಕಾರವು ಏನಾದರೂ ಒಂದು ಒಳ್ಳೆಯ ಯೋಜನೆಯನ್ನು ರೂಪಿಸುತ್ತಾರೆ ಎಂದು ಬಹಳ ಆಸೆ ಇಟ್ಟುಕೊಳ್ಳಲಾಗಿತ್ತು. ಆದರೆ, ಪ್ರತಿಯೊಬ್ಬರ ಮೇಲೆ ಮತ್ತಷ್ಟು ಹೊರೆ ಹಾಕುವ ಮೂಲಕ ತಾನು ಬಂಡವಾಳಶಾಹಿಗಳ ಪರ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಿರೂಪಿಸಿದ್ದಾರೆ ಎಂದರು.

ರೈತರ ಸಾಲ ಮನ್ನಾ ಮಾಡುವ ಮೂಲಕ ಅವರ ಬಾಳಿಗೆ ಬೆಳಕಾಗಬಹುದಾಗಿತ್ತು. ಆದರೆ, ಅದಾವುದನ್ನೂ ಮಾಡದೆ ರಾಸಾಯನಿಕ ಗೊಬ್ಬರ, ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡುವ ಮೂಲಕ ರೈತರು ಕೃಷಿಯಿಂದ ಹಿಮ್ಮುಖರಾಗುವಂತೆ ಮಾಡಿದೆ. ಇಂಧನ ಹೆಚ್ಚಳದಿಂದಾಗಿ ಪ್ರತಿಯೊಂದು ಪದಾರ್ಥಗಳ ಬೆಲೆಯೂ ಹೆಚ್ಚಳವಾಗಲಿದೆ ಎಂಬ ಕನಿಷ್ಠ ಜ್ಞಾನವೂ ಪ್ರಧಾನಿ ಹಾಗೂ ವಿತ್ತ ಸಚಿವರಿಗೆ ಇದ್ದಂತಿಲ್ಲ ಎಂದು ಟೀಕಿಸಿದರು.

ಪ್ರಸ್ತುತ ಬಜೆಟ್‍ನಿಂದ ಒಂದು ವರ್ಷಕ್ಕೆ ಕುಟುಂಬದ ಒಬ್ಬನಿಗೆ 2 ಲಕ್ಷ ರೂ. ಆರ್ಥಿಕವಾಗಿ ಹೊರೆ ಆಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಹಳ ಬುದ್ಧಿವಂತಿಕೆ ಹಾಗೂ ನೈಪುಣ್ಯತೆಯಿಂದ ಜನಸಾಮಾನ್ಯರನ್ನು ಸಾಲದ ಕೂಪಕ್ಕೆ ತಳ್ಳುತ್ತಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ, ಅವರ ಪರ ನಿಂತಿಲ್ಲ. ವಿದ್ಯುತ್ ಹಾಗೂ ನೀರಾವರಿಗೆ ಆದ್ಯತೆ ನೀಡಿಲ್ಲ. ತಮಿಳುನಾಡು ಸೇರಿದಂತೆ ಇನ್ನಿತರೆ ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆ ರಾಜ್ಯಗಳ ಪರ ಬಜೆಟ್ ಮಂಡಿಸಲಾಗಿದೆ ಎಂದು ಛೇಡಿಸಿದರು.

See also  ಶೋಕಿ ಜೀವನಕ್ಕಾಗಿ ಕೋಟಿಗಟ್ಟಲೆ ವಂಚನೆ: ಆರೋಪಿ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು