News Kannada
Thursday, December 01 2022

ಮೈಸೂರು

ಮೈಸೂರು ಜಿಲ್ಲೆ ಪ್ರವೇಶಿಸಲು ಕೋವಿಡ್ ನೆಗೆಟಿವ್ ರಿಪೋರ್ಟ್ ನೀಡುವಂತೆ ಸೂಚನೆ

Photo Credit :

ಮೈಸೂರು ಜಿಲ್ಲೆ ಪ್ರವೇಶಿಸಲು ಕೋವಿಡ್ ನೆಗೆಟಿವ್ ರಿಪೋರ್ಟ್ ನೀಡುವಂತೆ ಸೂಚನೆ

ಮೈಸೂರು : ರಾಜ್ಯದಲ್ಲಿ ಹಲವಾರು ಕೊರೋನಾ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕೋವಿಡ್ 19 ನೆಗೆಟಿವ್ ರಿಪೋರ್ಟ್ ತರಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ .

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಮೈಸೂರು ಜಿಲ್ಲೆಯ ಸಾವಿರಾರು ಮಂದಿ ಪ್ರತಿದಿನ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ, ಇದರ ಜತೆಗೆ ಮೈಸೂರು ಜಿಲ್ಲೆಗೆ ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ . ಇದರಿಂದ ಮೈಸೂರು ಜಿಲ್ಲೆಯಾದ್ಯಂತ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು , ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕಳೆದ 74 ಗಂಟೆಗಳ ಕೋವಿಡ್ ನೆಗೆಟಿವ್ ರಿಪೋರ್ಟ್ ತರಬೇಕು.  ಆದರೆ ಇದು ಕಡ್ಡಾಯವಲ್ಲ ಕೇವಲ ಸಲಹ ಸೂಚನೆಯಷ್ಟೆ ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ .

ಇನ್ನೊಂದೆಡೆ, ಚಿತ್ರಮಂದಿರ ಪ್ರವೇಶಿಸಲು ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಎಂಬ ಜಿಲ್ಲಾಧಿಕಾರಿಗಳ ಆದೇಶಕ್ಕೆ ಚಿತ್ರ ಮಂದಿರಗಳ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ .

 

 

See also  ಮೈಸೂರು ಅಂಚೆ ಕಚೇರಿಗಳಲ್ಲಿ ಆಧಾರ್ ಸೇವೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು