NewsKarnataka
Saturday, October 23 2021

ಮೈಸೂರು

ಸ್ನೇಹಿತನ ಬರ್ತ್‌ ಡೇ ಗೆ ತೆರಳಿದ್ದ ಇಬ್ಬರು ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ನೀರುಪಾಲು

ಮೈಸೂರು: ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಬರ್ತ್​ಡೇ ಪಾರ್ಟಿಗೆ ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಡಿಮಾಲಂಗಿ ಗ್ರಾಮದ ಬಳಿ ನಡೆದಿದೆ.ಮೃತರನ್ನು ಅಭಿಷೇಕ್ (21) ಹಾಗೂ ಅಂಕೇಶ್ (21) ಎಂದು ಗುರುತಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕಿನಕಹಳ್ಳಿ ಗ್ರಾಮದ ನಿವಾಸಿಗಳಾದ ಇವರಿಬ್ಬರು, ಚಾಮರಾಜನಗರದ ಸರ್ಕಾರಿ ಇಂಜಿನಿಯರಿಂಗ್​ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.
ತಡಿಮಾಲಂಗಿ ಗ್ರಾಮಕ್ಕೆ ಸ್ನೇಹಿತನ ಹುಟ್ಟುಹಬ್ಬಕ್ಕೆಂದು ತೆರಳಿದ್ದ ಸ್ನೇಹಿತರು, ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದು, ಇವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ವಿದ್ಯಾರ್ಥಿಗಳ ಮೃತದೇಹಕ್ಕಾಗಿ ಶೋಧ ನಡೆಸುತ್ತಿದ್ದಾರೆ. ಈ ಕುರಿತು ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!