News Kannada
Thursday, December 01 2022

ಮೈಸೂರು

ಹೋರಾಟದ ಸಂದರ್ಭದ ಮಾತಿಗೂ ಈಗಿನ ಮಾತಿಗೂ ವ್ಯತ್ಯಾಸವಿದೆ ಎಂದ ಶಾಸಕ ಎನ್‌ ಮಹೇಶ್‌

Photo Credit :

ಮೈಸೂರು: ಹೋರಾಟಗಳ ಸಂದರ್ಭದಲ್ಲಿ ಆಡಿದ ಮಾತಿಗೂ ಅಧಿಕಾರ-ಸ್ಥಾನಗಳಿಗೆ ಬಂದಾಗಿನ ಮಾತೇ ಬೇರೆ ಎಂಬುದು ನನಗೆ ಅರ್ಥವಾಗಿದೆ ಎಂದು ಚಾಮರಾಜನಗರದ ಶಾಸಕ ಎನ್‌.ಮಹೇಶ್‌ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‌ಪಿ ಪಕ್ಷದಿಂದ ತಮಗೆ ಮೋಸವಾಗಿದೆಯೇ ಹೊರತು ತಮ್ಮಿಂದ ಬಿಎಸ್‌ಪಿಗೆ ಮೋಸ ಆಗಿಲ್ಲ. ಬಿಎಸ್‌ಪಿ ನನ್ನ ತಾಯಿ ಪಕ್ಷ ಎಂದು ಹೇಳಿದ್ದೆ. ಆದರೆ, ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಏನು ಮಾಡಬೇಕು? ಮಗ ಅನಾಥನಾಗಿದ್ದ, ಹೀಗಾಗಿ ರಾಜಕೀಯವಾಗಿ ದಾರಿ ಕಂಡುಕೊಂಡಿದ್ದೇನೆ ಎಂದು ಸ್ಪಷ್ಟಪಡಿಸಿದರು. ನನ್ನನ್ನು ಟ್ರೋಲ್ ಮಾಡುತ್ತಿರುವವರು ಯಾರು ಎಂಬುದು ನನಗೆ ಗೊತ್ತಿದೆ. ಬಿಎಸ್‌ಪಿ ಗೆಳೆಯರಿಗೆ ನಾನು ಹೇಳುವುದಿಷ್ಟು. ನನ್ನನ್ನು ಟ್ರೋಲ್ ಮಾಡಿಕೊಂಡು ಸಮಯ ವ್ಯರ್ಥ ಮಾಡಬೇಡಿ. ಆ ಸಮಯವನ್ನು ಬಿಎಸ್‌ಪಿ ಪಕ್ಷ ಕಟ್ಟಲು ಬಳಸಿ. ನನ್ನನ್ನು ಟ್ರೋಲ್ ಮಾಡುತ್ತಿರುವವರಿಗೆ ಮಲೆ ಮಹದೇಶ್ವರ ಸ್ವಾಮಿ ಒಳೆಯದ್ದನ್ನ ಮಾಡಲಿ ಎಂದರು.
ಅವತ್ತಿನ ರಾಜಕೀಯ ಸಂದರ್ಭಕ್ಕೆ ಹೇಳಿದ ಮಾತುಗಳನ್ನು ಇವತ್ತಿನ ನೆಲೆಯಲ್ಲಿ ನಿಂತು ನೋಡಬಾರದು. ಹೋರಾಟಗಳ ವೇಳೆ ಹೇಳಿದ ಮಾತೇ ಬೇರೆ. ಅಧಿಕಾರ, ಸ್ಥಾನಗಳಿಗೆ ಬಂದಾಗಿನ ಮಾತೇ ಬೇರೆ ಎಂಬುದು ನನಗೆ ಅರ್ಥವಾಗಿದೆ ಎಂದು ಮಾತನಾಡಿದರು. ನಮ್ಮ ಮತ ಬ್ಯಾಂಕ್ ಯಾವುದು ನಮ್ಮನ್ನ ಬಿಟ್ಟು ಹೋಗಿಲ್ಲ. ನನಗೆ ಬಿಜೆಪಿ ಸೇರುವುದು ಬಿಟ್ಟು ಬೇರೆ ದಾರಿಯೇ ಇರಲಿಲ್ಲ. ಕಾಂಗ್ರೆಸ್‌ನಲ್ಲಿ ಸ್ಥಾನಗಳು ಇಲ್ಲ. ಇದಿಲ್ಲದಿದ್ದರೆ ಚುನಾವಣಾ ರಾಜಕಾರಣ ಬಿಡಬೇಕಿತ್ತು. ಹೀಗಾಗಿ, ಬಿಜೆಪಿ ಸೇರಿದ್ದೇನೆ ಎಂದು ತಿಳಿಸಿದರು.

 

See also  ಆಸ್ಪತ್ರೆಯವರು ಸಾವಿನ ಸಂಖ್ಯೆ ಮುಚ್ಚಿಡುತ್ತಿದ್ದಾರೆ ; ಹನೂರು ಶಾಸಕ ನರೇಂದ್ರ ಆರೋಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು