ಮೈಸೂರು: ರಾಜ್ಯದ ಡಿಜಿಟಲ್ ಉದ್ಯಮದ ವಹಿವಾಟು 2025ರ ವೇಳೆಗೆ ₹ 24.5 ಲಕ್ಷ ಕೋಟಿ ತಲುಪ ಬೇಕೆಂಬ ಗುರಿ ಇದೆ’ ಎಂದು ಐ.ಟಿ., ಬಿ.ಟಿ. ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಇಲ್ಲಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ಸಿಲ್ವರ್ ಸ್ಪಿರಿಟ್ ಟೆಕ್ನಾಲಜಿ ಪಾರ್ಕ್‌ನಲ್ಲಿ ಶುಕ್ರವಾರ ‘ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್’ನ ಮೈಸೂರು ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.
‘ಭಾರತದ ಡಿಜಿಟಲ್ ಉದ್ಯಮದ ವಹಿವಾಟು ₹ 74 ಲಕ್ಷ ಕೋಟಿ ಆಗಬೇಕೆಂಬು ಪ್ರಧಾನಿ ಗುರಿಗೆ ಪೂರಕವಾಗಿ ರಾಜ್ಯದ ವಹಿವಾಟನ್ನೂ ಹೆಚ್ಚಿಸಲು ಪ್ರಯತ್ನಿಸಲಾಗುವುದು’ ಎಂದರು.
ಡಿಜಿಟಲ್ ಎಕಾನಮಿ ಮಿಷನ್ ಮೂಲಕ ಮೈಸೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಶಿವಮೊಗ್ಗದಂಥ 2ನೇ ಹಂತದ ನಗರಗಳಲ್ಲಿ ಹೆಚ್ಚು ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ ಎಂದರು.