News Kannada
Tuesday, December 06 2022

ಮೈಸೂರು

ಮೈಸೂರಿನಲ್ಲಿ ಗಣೇಶೋತ್ಸವಕ್ಕೆ ಕೋವಿಡ್ ನಿಯಮ ಪಾಲನೆ ಕಡ್ಡಾಯ

Photo Credit :

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ  ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಕೋವಿಡ್-19  ನಿಯಮ ಪಾಲನೆಯೊಂದಿಗೆ  ಆಚರಿಸುವಂತೆ ನಗರದ ಜನತೆಗೆ ಸೂಚಿಸಿರುವ ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ  ಅವರು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಆದೇಶಿಸಿದ್ದಾರೆ.

ಈ ಸಂಬಂಧ ಮೈಸೂರು ನಗರದ ಪೊಲೀಸ್ ಅಧಿಕಾರಿಗಳ ಸಭೆಯನ್ನು ನಡೆಸಿರುವ ಅವರು  ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಸಂಬಂಧ ಕೈಗೊಳ್ಳಬೇಕಾದ ಬಂದೋಬಸ್ತ್ ಕರ್ತವ್ಯಗಳ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ನಗರದಲ್ಲಿ ಗಣೇಶೋತ್ಸವ ಆಚರಣೆ ಸಂಬಂಧ ಸಾರ್ವಜನಿಕರು ಪಾಲಿಸಬೇಕಾದ ನಿಯಮಗಳ ಬಗ್ಗೆ ಮಾಹಿತಿ ನೀಡಲಾಗಿದ್ದು ಅದು ಹೀಗಿದೆ…

ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಎತ್ತರ ಮೀರದಂತೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು ಮತ್ತು ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು. ಇದಕ್ಕೆ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು. ಗರಿಷ್ಟ 5 ದಿನಗಳ ಒಳಗೆ ಗಣೇಶ ಮೂರ್ತಿಯನ್ನು ವಿಸರ್ಜಿಸಬೇಕು.

ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳವನ್ನು 20 ಜನಕ್ಕೆ ಸೀಮಿತವಾಗಿರುವಂತೆ ನಿರ್ಮಿಸಬೇಕು. ಪ್ರತಿಷ್ಠಾಪನೆ ಸ್ಥಳದ ಮಾಲೀಕರಿಂದ ಅನುಮತಿ ಪತ್ರವನ್ನು ಪಡೆದುಕೊಳ್ಳಬೇಕು. ವಿದ್ಯುತ್‌  ಚ್ಛಕ್ತಿ ಅಳಡಿಸುವ ಕುರಿತಂತೆ ಚೆಸ್ಕಾಂ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು, ಆಯೋಜಕರು ಕೋವಿಡ್-19ರ ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರ ಹೊಂದಿರುವುದು ಅಗತ್ಯ,

ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು, ಸ್ಥಳೀಯ ಆಡಳಿತ ವತಿಯಿಂದ ನಿಗಧಿಪಡಿಸಿದ ಸ್ಥಳದಲ್ಲಿ ಮಾತ್ರ ಗಣಪತಿ ಮೂರ್ತಿ ವಿಸರ್ಜಿಸಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ದಿನದ 24 ಗಂಟೆ ಸ್ವಯಂ ಸೇವಕರನ್ನು ನೇಮಿಸಬೇಕು.  ಸ್ವಯಂ ಸೇವಕರ ಪಟ್ಟಿಯನ್ನು ಸ್ಥಳೀಯ ಠಾಣೆಗೆ ಮುಂಚಿತವಾಗಿ ನೀಡಬೇಕು.

ಅಗ್ನಿ ಅವಘಡಗಳನ್ನು ತಡೆಗಟ್ಟಲು ಮುಂಜಾಗ್ರತೆ ವಹಿಸಬೇಕು, ದಿನ ನಿತ್ಯ ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳವನ್ನು ಸ್ಯಾನಿಟೈಸ್ ಮಾಡಬೇಕು ಹಾಗೂ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಮಾಡಬೇಕು. ಭಕ್ತಾದಿಗಳಿಗೆ ಕನಿಷ್ಟ 6 ಅಡಿ ಸಾಮಾಜಿಕ ಅಂತರವನ್ನು ಕಾಪಾಡುವಂತೆ ಸ್ಥಳ ಗುರುತಿಸಬೇಕು. ಭಕ್ತಾದಿಗಳು ಕಡ್ಡಾಯವಾಗಿ ಮುಖಗವಸು (ಫೇಸ್ ಮಾಸ್ಕ್) ಧರಿಸುವಂತೆ ನೋಡಿಕೊಳ್ಳಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಸಿ.ಸಿ.ಟಿವಿ ಅಳವಡಿಸಬೇಕು.

ಅಪರಿಚಿತ ವ್ಯಕ್ತಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನಾ ಸ್ಥಳಕ್ಕೆ ಭೇಟಿ ನೀಡಿದ್ದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಗಣಪತಿ ವಿಸರ್ಜನೆ ಮಾಡುವ ಸ್ಥಳದ ಮತ್ತು ವಿಸರ್ಜನೆ ಮಾಡಲು ಹೋಗುವ ಮಾರ್ಗದ ಮಾಹಿತಿಯನ್ನು ಗಣಪತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯುವ ಸಮಯದಲ್ಲಿ ನೀಡಬೇಕು ಎಂದು ಸೂಚಿಸಿದ್ದಾರೆ.

ಇನ್ನು ಗಣಪತಿ ಪ್ರತಿಷ್ಠಾಪನಾ ಸ್ಥಳದಲ್ಲಿ ಏನೇನು ಮಾಡಬಾರದು ಎಂಬುದರ ಬಗ್ಗೆಯೂ ಎಚ್ಚರಿಕೆ ನೀಡಲಾಗಿದ್ದು, ತಕರಾರು ಇರುವ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಾರದು, ಕ್ರಮ ವಿದ್ಯುತ್ ಸಂಪರ್ಕ ಪಡೆಯಬಾರದು, ಸಾರ್ವಜನಿಕರಿಂದ ಬಲವಂತವಾಗಿ ಚಂದಾ ವಸೂಲಿ ಮಾಡಬಾರದು, ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗುವಂತೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬಾರದು.

ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮುಖ್ಯವಾಗಿ ಡಿ.ಜೆ.ಯ ಮೂಲಕ ಹಾಗೂ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಬಾರದು ಇದಲ್ಲದೆ,

ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಧ್ವನಿವರ್ಧಕ, ಡಿ.ಜೆ. ಮೆರವಣಿಯನ್ನು ಮಾಡಬಾರದು. ಗಣೇಶ ಮೂರ್ತಿಗಳನ್ನು ಎಲ್ಲೆಂದರಲ್ಲಿ ವಿಸರ್ಜಿಸಬಾರದು.  ಗಣೇಶ ಮೂರ್ತಿಗಳ ಪಾವಿತ್ರ್ಯತೆ ಕಾಪಾಡಬೇಕು.

ಮುಖಗವಸು (ಫೇಸ್ ಮಾಸ್ಕ್) ಧರಿಸದವರಿಗೆ ಪ್ರವೇಶ ಕಲ್ಪಿಸಬಾರದು, ಸರ್ಕಾರದ, ಸ್ಥಳೀಯ ಆಡಳಿತ, ಪೊಲೀಸ್ ಇಲಾಖೆಯ ಸೂಚನೆಗಳನ್ನು ಉಲ್ಲಂಘಿಸಬಾರದು. ಕೋವಿಡ್-19  ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಉಲ್ಲಂಘಿಸಬಾರದು. ಅನ್ನಸಂತರ್ಪಣೆ, ಇನ್ನಿತರೆ ಪ್ರಸಾದ ವಿತರಣೆ ಮಾಡಬಾರದು. ಪಟಾಕಿ, ಸಿಡಿಮದ್ದುಗಳನ್ನು ಸಿಡಿಸಬಾರದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಪರಿಸರಕ್ಕೆ ಹಾನಿಯುಂಟಾಗುವ ಯಾವುದೇ ರೀತಿಯ ಗಣಪತಿಗಳನ್ನು ಪ್ರತಿಷ್ಠಾಪಿಸದಂತೆ ಎಚ್ಚರಿಕೆ ನೀಡಲಾಗಿದೆ.

 

See also  ವಿಶ್ವ ಹೃದಯ ದಿನಾಚರಣೆಯಲ್ಲಿ ಹೃದಯ ತಜ್ಞರಿಗೆ ಸನ್ಮಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು