News Kannada
Sunday, October 02 2022

ಮೈಸೂರು

ನಾಡಿನ ಭಾಷೆ , ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದ ವಿಜಯನಗರ ಸಾಮ್ರಾಜ್ಯ ನಮ್ಮದು: ಸಚಿವ ಆನಂದ್ ಸಿಂಗ್ - 1 min read

Photo Credit :

ವಿಜಯನಗರ: ನೂತನ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಪ್ರವಾಸೋದ್ಯಮ, ಪರಿಸರ ಹಾಗೂ ಜೀವಶಾಸ್ತ್ರ ಹಾಗೂ ಬಳ್ಳಾರಿ – ವಿಜಯನಗರ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಧ್ವಜಾರೋಹಣ ನೆರವೇರಿಸಿ, ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿ, ನಾಡದೇವತೆ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕರ್ನಾಟಕ ರಾಜ್ಯೋತ್ಸವ ಸಂದೇಶ ನೀಡಿದರು.

ಕನ್ನಡ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಸಂಪ್ರದಾಯ, ಭವ್ಯ ಪರಂಪರೆ ಹಾಗೂ ಅಗಾಧ ಆಲೋಚನೆಗಳು ಈ ರಾಜ್ಯದ ಅಭಿವೃದ್ಧಿಗೆ ಬಳಸಿಕೊಳ್ಳುವ ಮೂಲಕ ನಾಡು ನುಡಿಯ ರಕ್ಷಣೆಯೊಂದಿಗೆ ಉಜ್ವಲ ಭವಿಷ್ಯ ರೂಪಿಸುವ ಜವಾಬ್ದಾರಿ ನಮ್ಮಲ್ಲರ ಮೇಲಿದೆ ಎಂದು ಸಚಿವ ಆನಂದ್ ಸಿಂಗ್ ಅವರು ಹೇಳಿದರು.

ಕಾವೇರಿಯಿಂದ ಗೋದಾವರಿಯ ವರೆಗೆ ಹಬ್ಬಿದ ಈ ಪ್ರದೇಶದ ಸಂಸ್ಕೃತಿ ಭಾರತದ ಅತೀ ಪ್ರಾಚೀನ ಸಂಸ್ಕೃತಿಗಳಲ್ಲಿ ಒಂದು. ಜಗತ್ತಿನ ಇತರೆ ಭಾಷೆಗಳು ಅಂಬೆಗಾಲಿನಿಂದ ನಡೆಯುವ ಸಂದರ್ಭದಲ್ಲಿ ಕನ್ನಡ ಭಾಷೆಯಲ್ಲಿ ಮಹಾ ಕಾವ್ಯಗಳು ರಚನೆಗೊಂಡಿರುವ ಕಥೆ ಬಲು ರೋಚಕವಾಗಿದೆ.

ಈ ನಾಡನ್ನು ಶಾತವಾಹನರಿಂದ ಆರಂಭಗೊಂಡು ವಿವಿಧ ರಾಜ ಮಹಾರಾಜರು ಆಳಿದ್ದಾರೆ ಜೊತೆಗೆ ಈ ನಾಡನ್ನು ಭದ್ರಪಡಿಸುವ ಮೂಲಕ ಶ್ರೀಮಂತ ಸಂಸ್ಕೃತಿಯನ್ನು ಪ್ರಪಂಚಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಸುರ್ವಣ ಯುಗವನ್ನು ಸೃಷ್ಟಿ ಮಾಡಿ ಈ ನಾಡಿನ ಕಲೆ, ಭಾಷೆ ಹಾಗೂ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದ “ಎಂದೂ ಮರೆಯದ” ವಿಜಯನಗರ ಸಾಮ್ರಾಜ್ಯ ನಮ್ಮದು; ಆ ಹೆಸರಿನಲ್ಲಿಯೇ ನೂತನ ಜಿಲ್ಲೆ ಉದಯಗೊಂಡಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಸಚಿವರು ಹೇಳಿದರು.

ಪ್ರಸಕ್ತ ಸಾಲಿನಲ್ಲಿ 66 ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಭಿನ್ನವಾಗಿ ಹಾಗೂ ವೈಶಿಷ್ಟ ಪೂರ್ಣವಾಗಿ ಆಚರಿಸುವ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ರಾಜ್ಯೋತ್ಸವ ಆಚರಣೆಗೆ ಮೆರಗನ್ನು ಉಂಟುಮಾಡಿದೆ. ಅ.28ರಂದು ಹಮ್ಮಿಕೊಂಡಿದ್ದ ಲಕ್ಷ ಲಕ್ಷ ಕಂಠಗಳಲ್ಲಿ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮದಲ್ಲಿ ನಮ್ಮ ಜಿಲ್ಲೆಯ 91,695 ಜನರು ಭಾಗವಹಿಸಿರುವುದು ರಾಜ್ಯದ ಗಮನವನ್ನು ತನ್ನೆಡೆಗೆ ಸೆಳೆಯುವಂತೆ ಮಾಡಿ ಕರ್ನಾಟಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು, ಕೋವಿಡ್ ಲಸಿಕಾಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ರಾಜ್ಯೋತ್ಸವ ನಿಮಿತ್ತ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷ ಅಶೋಕ ಜೀರೆ, ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್,ಜಿಪಂ ಸಿಇಒ ಭೋಯರ್ ಹರ್ಷಲ್ ನಾರಾಯಣರಾವ್, ಎಸ್ಪಿ ಡಾ.ಅರುಣ ಎಸ್.ಕೆ,ಸಹಾಯಕ ಆಯುಕ್ತ ಸಿದ್ದರಾಮೇಶ್ವರ,ತಹಸೀಲ್ದಾರ್ ವಿಶ್ವನಾಥ, ತಾ.ಪಂ. ಇ.ಒ. ವಿಶ್ವನಾಥ, ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

See also  ವಿಜಯನಗರ ಜಿಲ್ಲೆ ಉದಯಕ್ಕೆ ಆನಂದ್ ಸಿಂಗ್ ಪಾತ್ರ ಬಹು ಮುಖ್ಯ : ಬಿಎಸ್ ವೈ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು