News Kannada
Friday, September 30 2022

ಮೈಸೂರು

ಎಚ್.ಡಿ.ಕೋಟೆ: ಕಬಿನಿ-ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - 1 min read

CM dedicates to Kabini-KRS
Photo Credit : By Author

ಎಚ್.ಡಿ.ಕೋಟೆ: ಕರ್ನಾಟಕದ ಜೀವನಾಡಿ ಜಲಾಶಯಗಳಾದ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧರ್ಮಪತ್ನಿ ಚೆನ್ನಮ್ಮರೊಂದಿಗೆ ಬಾಗಿನ ಅರ್ಪಿಸಿದರು.

ಬೆಂಗಳೂರಿನಿಂದ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ಮುಖ್ಯಮಂತ್ರಿಗಳು ಬಳಿಕ ಚಾಮುಂಡಿಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ  ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ತೆರಳಿ ಕನ್ಯಾ ಲಗ್ನ, ಅಭಿಜನ್ ಮುಹೂರ್ತದಲ್ಲಿ ಜಲಾಶಯಕ್ಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಆ ನಂತರ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ತೆರಳಿ ಪತ್ನಿ ಚೆನ್ನಮ್ಮ ಅವರೊಂದಿಗೆ ಬಾಗಿನ ಅರ್ಪಿಸಿದರು. ಇದೇ ವೇಳೆ ಕೆಆರ್‌ಎಸ್ ಅಣೆಕಟ್ಟು ಕೆಳಭಾಗದಲ್ಲಿರುವ ಕಾವೇರಿ ಮಾತೆ ವಿಗ್ರಹಕ್ಕೆ ಸಿಎಂ ಬೊಮ್ಮಾಯಿ ಪೂಜೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು ಆಷಾಢ ಮಾಸದಲ್ಲಿ ಜಲಾಶಯ ತುಂಬಿರೋದು ವಿಶೇಷವಾಗಿದೆ. ರೈತರು ಈಗಾಗಲೇ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕಾವೇರಿ ಜಲಾನಯನ ಪ್ರದೇಶದಲ್ಲಿ 8800 ಕಿ.ಮೀ. ನಾಲೆ ಇವೆ. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಅಭಿವೃದ್ಧಿಗೆ ಸೂಚಿಸಿದ್ದೆ. ಕಾವೇರಿ ಜಲಾನಯನ ಪ್ರದೇಶದ 2500 ಕಿ.ಮೀ. ಅಭಿವೃದ್ಧಿ ಆಗಿದೆ ಎಂದು ಹೇಳಿದರು.

ಮೇಕೆದಾಟು ಯೋಜನೆಯ ಅಂತಿಮ ತೀರ್ಪು ಮುಂದಿನ ವಾರದೊಳಗೆ ಹೊರಬೀಳುವ ಸಾಧ್ಯತೆಯಿದೆ. ರಾಜ್ಯ ಸಿದ್ಧಪಡಿಸಿರುವ ಡಿಪಿಆರ್‌ಗೆ ಅನುಮೋದನೆ ದೊರೆತ ಬಳಿಕ  ಮೇಕೆದಾಟು  ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಈ ಯೋಜನೆಯಿಂದ ಮಂಡ್ಯ ಹಾಗೂ ಬೆಂಗಳೂರು ಜನರ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಸಾಧ್ಯವಾಗುತ್ತದೆ. ಯೋಜನೆಗೆ ಚಾಲನೆ ನೀಡಲು ಬೇಕಾದ ಅನುಮತಿಗಳನ್ನು ಪಡೆದುಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ.

ವಿಶ್ವೇಶ್ವರಯ್ಯ ನಾಲೆಯ ಅಭಿವೃಧ್ಧಿಗೆ ೫೬೦ ಕೋಟಿ ರೂ. ಒದಗಿಸಿ ಬ್ರಾಂಚ್ ಕೆನಾಲ್‌ಗಳನ್ನು ನಿರ್ಮಿಸಲಾಗಿದೆ. ಮದ್ದೂರು ಬ್ರಾಂಚ್ ಕೆನಾಲ್, ಸಾಹುಕಾರ್ ಚೆನ್ನಯ್ಯ ಕೆನಾಲ್ ಸೇರಿದಂತೆ ಉಳಿದ ಬ್ರ್ಯಾಂಚ್ ಕೆನಾಲ್‌ಗಳಿಗೆ ನೀರು ಪೂರೈಸಲು ಸಾಧ್ಯವಾಗಿದೆ. ಈ ವ?ದ ಯೋಜನೆಯಲ್ಲಿ ವಿಶ್ವೇಶ್ವರಯ್ಯ ನಾಲೆಯ ನೀರು ರೈತರಿಗೆ ಒದಗಿಸುವ ಕೆಲಸ ಕೈಗೊಳ್ಳಲಾಗುವುದು.

ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಜಲಾಶಯಗಳು ತುಂಬಿರುವ ಅಪರೂಪದ ವರ್ಷ ಇದಾಗಿದೆ. ನಾಡಿನಾದ್ಯಂತ ಉತ್ತಮ ಮಳೆಯಾಗಿದೆ. ರಾಜ್ಯದ ಬಹುತೇಕ ಎಲ್ಲ್ಲಾ ಜಲಾಶಯಗಳು ತುಂಬಿವೆ. ಈ ಸುಸಂದರ್ಭದಲ್ಲಿ ಬಾಗಿನ ಅರ್ಪಿಸಿರುವುದು ನನ್ನ ಸುಯೋಗ. ಕಾವೇರಿ ತಾಯಿ ರಾಜ್ಯದ ಜೀವನದಿ. ಒಂದು ನದಿ ಮನುಷ್ಯನ ಬೇಕು ಬೇಡಗಳನ್ನು ಪೂರೈಸುವ ಜೊತೆಗೆ ಒಂದು ಸಂಸ್ಕೃತಿಯನ್ನು ಹುಟ್ಟುಹಾಕುತ್ತದೆ. ಇಂತಹ ಪವಿತ್ರವಾದ ಕಾವೇರಿ ನದಿಯ ಸದುಪಯೋಗ ಮಾಡಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಮೈಸೂರಿನ ಮಹಾರಾಜರು ಕನ್ನಂಬಾಡಿ ಕಟ್ಟೆಯನ್ನು ಕಟ್ಟುವಲ್ಲಿನ ಅವರ ಶ್ರಮ, ತ್ಯಾಗ ಎಂದೆಂದಿಗೂ ಮರೆಯಲು ಸಾಧ್ಯವಿಲ್ಲ. ಸರ್.ಎಂ.ವಿಶ್ವೇಶ್ವರಯ್ಯ ಅವರನ್ನು ಈ ಸುದಿನದಂದು ನೆನೆಯಬೇಕಿದೆ ಎಂದರು.

ಕೆಆರ್‌ಎಸ್ ಜಲಾಶಯವನ್ನು ಉತ್ತಮವಾಗಿ ನಿರ್ವಹಿಸಬೇಕಾಗಿದೆ. 2008ರಲ್ಲಿ ನೀರಾವರಿ ಸಚಿವನಾಗಿದ್ದಾಗ ಕೆಆರ್‌ಎಸ್ ಕ್ರೆಸ್ಟ್ ಗೇಟ್‌ನಿಂದ ನೀರು ವ್ಯರ್ಥವಾಗಿ ಪೋಲಾಗುತ್ತಿರುವುದನ್ನು ತಡೆಗಟ್ಟಲು ಗೇಟ್‌ಗಳನ್ನು  ಬದಲಿಸಲಾಯಿತು. ಜಲಾಶಯದ ಒಟ್ಟು 136 ಗೇಟ್‌ಗಳಲ್ಲಿ ಉಳಿದ 61 ಗೇಟ್‌ಗಳನ್ನು ಒಂದು ವರ್ಷದೊಳಗೆ ಬದಲಿಸಿ, ಪುನ: ನಿರ್ಮಿಸಲು ಈಗಾಗಲೇ ಆದೇಶ ನೀಡಲಾಗಿದ್ದು, 160 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ  ಕ್ರೆಸ್ಟ್ ಗೇಟ್‌ಗಳ ಬದಲಾವಣೆಯ ಕಾಮಗಾರಿ ಸಂಪೂರ್ಣ ಮುಗಿದ ನಂತರ ಕೆಆರ್‌ಎಸ್ ಜಲಾಶಯದ ವಿಜೃಂಭಣೆಯ ಆಚರಣೆಯನ್ನು ಮಾಡಲಾಗುವುದು ಎಂದರು.

See also  ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ದಂತ ಚಿಕಿತ್ಸಾಲಯ ವಿಭಾಗ ಉದ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು