News Kannada
Wednesday, August 10 2022

ಮೈಸೂರು

ಮೈಸೂರು: ಮನೆಗೆ ಕನ್ನ ಹಾಕುತ್ತಿದ್ದ  ಬೈಕ್ ಕಳ್ಳರ ಬಂಧನ - 1 min read

Bike thieves arrested for stealing from house

ಮೈಸೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮನೆಗೆ ಕನ್ನ ಹಾಕುತ್ತಿದ್ದ ಮತ್ತು ದ್ವಿಚಕ್ರವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವಿಜಯನಗರ ಪೊಲೀಸ್ ಠಾಣಾ ಕನ್ನಾ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಜು.18ರಂದು ನಗರ ಸಿಟಿ ಬಸ್ ನಿಲ್ದಾಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿತ್ತು. ಬಂಧಿತ ಆರೋಪಿ ತನ್ನ ಇನ್ನಿಬ್ಬರು ಸಹಚರರೊಂದಿಗೆ ಸೇರಿಕೊಂಡು ಮೈಸೂರು ನಗರ, ಜಿಲ್ಲೆ, ಮಂಡ್ಯ ಜಿಲ್ಲೆ, ಬೆಂಗಳೂರು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಮನೆಗೆ ಕನ್ನ ಹಾಕಿರುವುದಾಗಿ ಒಪ್ಪಿಕೊಂಡಿದ್ದು, ಈತ ನೀಡಿದ ಮಾಹಿತಿ ಮೇರೆಗೆ ಕಳ್ಳತನ ಮಾಡಿದ್ದ ಮಾಲುಗಳನ್ನು ಸ್ವೀಕರಿಸಿ ವಿಲೇವಾರಿ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನೂ ಬಂಧಿಸಲಾಗಿದೆ.

ಸದ್ಯ ಆರೋಪಿಗಳಿಂದ 9 ಮನೆ ಕಳುವು ಪ್ರಕರಣಗಳಿಗೆ ಸಂಬಂಧಪಟ್ಟಂತೆ 10,15,000 ರೂ ಮೌಲ್ಯದ 191 ಗ್ರಾಂ ತೂಕದ ಚಿನ್ನಾಭರಣ, 8.330 ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು, ಏರ್‌ಗನ್ ವಶಪಡಿಸಿಕೊಳ್ಳಲಾಗಿದೆ.

1ನೇ ಆರೋಪಿ ತನ್ನ ಬಾಲ್ಯಾವಸ್ಥೆಯಿಂದಲೂ ಮನೆಗಳ್ಳತನ ಮಾಡಿ, ಬಾಲ ಮಂದಿರದಲ್ಲಿದ್ದು, ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದ. ಪ್ರಾಪ್ತ ವಯಸ್ಕನಾದ ನಂತರವು ಕಳ್ಳತನದ ಪ್ರವೃತ್ತಿ ಮುಂದುವರೆಸಿಕೊಂಡು ಬಂದಿರುವುದು ವಿಚಾರಣೆಯಿಂದ ತಿಳಿದು ಬಂದಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.

ಈ ಪತ್ತೆ ಕಾರ್ಯದಿಂದ ವಿಜಯನಗರ, ಮೇಟಗಳ್ಳಿ ಠಾಣೆಯ ತಲಾ 1 ಇಲವಾಲದ 2, ದಕ್ಷಿಣ ಠಾಣೆಯ 3, ಕೆಆರ್‌ಎಸ್ ಠಾಣೆ 1, ಬೆಂಗಳೂರು ಜಿಲ್ಲೆಯ ಕುಂಬಳಗೋಡು ಠಾಣೆಯ 1 ಮನೆ ಕನ್ನ ಕಳುವು ಪ್ರಕರಣಗಳು ಪತ್ತೆಯಾಗಿವೆ. ಮತ್ತೊಂದು ಪ್ರಕರಣದಲ್ಲಿ ನಗರದ ಲಕ್ಷ್ಮೀಪುರಂ ಪೊಲೀಸ್ ಠಾಣೆಯ ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಓರ್ವ  ಆರೋಪಿಯನ್ನು ಬಂಧಿಸಿದ್ದಾರೆ. ಈತ ಮೈಸೂರು ನಗರ, ಬೆಂಗಳೂರು, ರಾಮನಗರ ಜಿಲ್ಲೆಯ ವಿವಿಧ ಕಡೆಗಳಲ್ಲಿ ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದ, 9 ಲಕ್ಷ ಮೌಲ್ಯದ ವಿವಿಧ ಕಂಪನಿಯ 6 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪತ್ತೆ ಕಾರ್ಯದಿಂದ ಮೈಸೂರು ನಗರ ಲಕ್ಷ್ಮೀಪುರಂ ಠಾಣೆಯ 2, ಬೆಂಗಳೂರು ಬ್ಯಾಟರಾಯನಪುರದ 1, ರಾಜರಾಜೇಶ್ವರಿ ನಗರದ 1, ಚಾಮರಾಜಪೇಟೆಯ 1, ರಾಮನಗರ ಜಿಲ್ಲೆ ಚನ್ನಪಟ್ಟಣ ಠಾಣೆಯ 1 ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ.

See also  ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಹಗರಣ ಹಿನ್ನೆಲೆ ಇಂದು ಸೋನಿಯಾ ಗಾಂಧಿ ವಿಚಾರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು