News Kannada
Tuesday, June 06 2023
ಮೈಸೂರು

ಮೈಸೂರು: ಬಿಜೆಪಿ ದೇಶಕ್ಕೆ ನೀಡಿದ ಕೊಡುಗೆ ಏನಿದೆ ಎಂದ  ಸಿದ್ದರಾಮಯ್ಯ

Siddaramaiah has asked what is the contribution of THE BJP to the nation.
Photo Credit : By Author

ಮೈಸೂರು: ಕಾಂಗ್ರೆಸ್ ಪಕ್ಷ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದೆ. ಆದರೆ ಈ ದೇಶಕ್ಕೆ ಬಿಜೆಪಿಯ ಕೊಡುಗೆ ಏನಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದ ಇಲವಾಲ ಮತ್ತು ಜಯಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಲವಾಲದಲ್ಲಿ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಬ್ರಿಟೀಷರು ಸುಮಾರು 200 ವರ್ಷಗಳ ಕಾಲ ಈ ದೇಶ ಆಳಿದ್ದಾರೆ. ಕಾಂಗ್ರೆಸ್ ಪಕ್ಷ ನಮ್ಮನ್ನು ಸ್ವತಂತ್ರರನ್ನಾಗಿ ಮಾಡಲು ಹೋರಾಟ ಮಾಡಿ ಸ್ವಾತಂತ್ರ್ಯ ಕೊಡಿಸಿದೆ. ಬಾಲಗಂಗಾಧರನಾಥ ತಿಲಕ್, ಗೋಪಾಲಕೃಷ್ಣ ಗೋಖಲೆ, ಗಾಂಧೀಜಿ, ನೆಹರು ಸರ್ಧಾರ್ ವಲ್ಲಭಬಾಯಿ ಪಟೇಲ್, ಸುಭಾಷ್ ಚಂದ್ರಬೋಸ್, ಅಬ್ದುಲ್ ಕಲಾಂ, ಅಜಾದ್ ಇನ್ನು ಹಲವರು ಈ ದೇಶಕ್ಕಾಗಿ ಹೋರಾಟ, ತ್ಯಾಗ, ಬಲಿದಾನ ಮಾಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ.

ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲಾ ಧರ್ಮದವರು ಹೋರಾಟ ಮಾಡಿದರು. ಆದರೆ ಬಿಜೆಪಿಯಾಗಲಿ, ಜೆ.ಡಿ.ಎಸ್ ಆಗಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ. 1925ರಲ್ಲಿ ಆರ್‌ಎಸ್‌ಎಸ್ ಸ್ಥಾಪನೆಯಾಯಿತು. 1951ರಲ್ಲಿ ಜನಸಂಘ ಪ್ರಾರಂಭವಾಯಿತು. 1980ರಲ್ಲಿ ಬಿಜೆಪಿ ಸ್ಥಾಪನೆಯಾಯಿತು. ಇವರೆಲ್ಲರೂ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರಾ? ಎಂದು ಪ್ರಶ್ನಿಸಿದ ಅವರು, ರಾಷ್ಟ್ರಗೀತೆ, ಸಂವಿಧಾನ ರಚನೆಯಾಗಿದ್ದು, ಕಾಂಗ್ರೆಸ್‌ನಿಂದ ರಾಷ್ಟ್ರಧ್ವಜ ಎಂದರೆ ನಮಗೆ ಹೆಮ್ಮೆಯ ವಿಚಾರ. ಇದೇ ಧ್ವಜವನ್ನು ಸಾವರ್ಕರ್ ಗೋಲ್‌ವಾಲಕರ್ ವಿರೋಧಿಸಿದ್ದರು. ಯಾರಾದರು ಒಬ್ಬ ಬಿಜೆಪಿಯವರು ದೇಶಕ್ಕೆ ಸ್ವಾತಂತ್ರ ತರಲು ಸತ್ತಿದ್ದಾರಾ? ಆಸ್ತಿ ಕಳೆದುಕೊಂಡಿದ್ದಾರಾ? ದೇಶಭಕ್ತಿ ಪ್ರಾರಂಭವಾಗಿದ್ದೇ ಕಾಂಗ್ರೆಸ್ ಪಕ್ಷದಿಂದ ನಮಗೆ ಬಿಜೆಪಿಯವರು ದೇಶಭಕ್ತಿ ಹೇಳಲು ಬರ್‍ತಾರೆ ಎಂದು ವ್ಯಂಗ್ಯವಾಡಿದರು.

ಜೆಡಿಎಸ್‌ನವರು ಯಾವುದಕ್ಕೂ ಹೋರಾಟ ಮಾಡಿಲ್ಲ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲು ಶಕ್ತಿಯಿಲ್ಲ. ಬೇರೆಯವರ ಮನೆಯ ಬೆಂಕಿಯಲ್ಲಿ ಕೈಕಾಯಿಸಿಕೊಳ್ಳುವುದೇ ಅವರ ಕೆಲಸ. ನಾವು ಕಳೆದ ಚುನಾವಣೆಯಲ್ಲಿ 80ಜನ ಗೆದ್ದು, ಕೋಮುವಾದಿ ಪಕ್ಷ ಅಧಿಕಾರಕ್ಕೆ ಬರಬಾರದೆಂದು ಜೆಡಿಎಸ್‌ನವರಿಗೆ ಬೆಂಬಲ ನೀಡಿದ್ದೆವು. ಕುಮಾರಸ್ವಾಮಿ ವೆಸ್ಟೆಂಡ್ ಹೋಟೆಲ್‌ನಲ್ಲಿ ಕುಳಿತು ಸರಿಯಾಗಿ ಅಧಿಕಾರ ನಡೆಸದೆ ಅಧಿಕಾರ ಕಳೆದುಕೊಂಡರು ಎಂದರು.

ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಭಿನ್ನಾಭಿಪ್ರಾಯಗಳನ್ನು ಬಿಟ್ಟು ಬದ್ಧತೆಯಿಂದ ಕಾಂಗ್ರೆಸ್ ಪಕ್ಷದಲ್ಲೆ ಇರಬೇಕು. ನಾವು ಅಧಿಕಾರದಲ್ಲಿದ್ದಾಗ ಮಾಡಿದಂತಹ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಬೇಕು. ನಮ್ಮ ಸರ್ಕಾರಕ್ಕೆ ಇಂದಿನ ಶೇ.40 ಪರ್ಸೆಂಟ್ ಸರ್ಕಾರಕ್ಕೂ ಹೋಲಿಕೆ ಮಾಡಿ ಈ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಶಪತ ಮಾಡಬೇಕು ಎಂದ ಅವರು, 1978ರಲ್ಲಿ ಈ ತಾಲ್ಲೂಕಿನಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್, ಹಳ್ಳಿಗೆ ಸಿಟಿ ಬಸ್, ವರುಣಾ ಚಾನೆಲ್ ಇರಲಿಲ್ಲ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ನಾನು ಮಾಡಿದ್ದೇನೆ. ಈಗ ಏನು ಮಾಡದವರಿಗೆ ಅಧಿಕಾರ ಕೊಡುತಿದ್ದೀರಿ ಎಂದು ಬೇಸರ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರೂ ಸಹ ಒಗ್ಗಟ್ಟಿನಿಂದ ಕೆಲಸಮಾಡಿ ಗೆಲ್ಲಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಸಂಸದ ಆರ್.ಧ್ರುವನರಾಯಣ್, ಕೆಪಿಸಿಸಿ ಸದಸ್ಯರಾದ ಕೆ.ಮರೀಗೌಡ, ನರಸೇಗೌಡ, ಮಾಜಿ ಮೇಯರ್ ಟಿ.ಬಿ.ಚಿಕ್ಕಣ್ಣ, ಜೇಸುದಾಸ್, ಗುರುಪಾದಸ್ವಾಮಿ, ಜಿ.ಪಂ ಮಾಜಿ ಸದಸ್ಯರಾದ ರಾಕೇಶ್ ಪಾಪಣ್ಣ ಸೇರಿದಂತೆ ಹಲವರು ಇದ್ದರು.

See also  ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ 94ಸಿ ,94ಸಿ ಸಿ, ಹಕ್ಕುಪತ್ರ ವಿತರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು