News Kannada
Saturday, October 01 2022

ಮೈಸೂರು

ಮೈಸೂರು :ಫಿರಂಗಿ ಗಾಡಿಗಳಿಗೆ ಉಸ್ತುವಾರಿ ಸಚಿವರಿಂದ ಪೂಜೆ - 1 min read

Mysore: Puja by minister in charge of artillery carriages
Photo Credit : By Author

ಮೈಸೂರು: ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಾರಂಭವಾಗಲಿದ್ದು, ಆಕರ್ಷಕ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗಳು ಮೈಸೂರು ಅಂಬಾವಿಲಾಸ ಅರಮನೆ ಆವರಣದಲ್ಲಿ ಬೀಡು ಬಿಟ್ಟಿದ್ದು, ಭಾರ ಹೊರುವ ತಾಲೀಮಿನಲ್ಲಿ ಪಾಲ್ಗೊಂಡಿವೆ. ಆನೆಗಳು , ಕುದುರೆಗಳ ಸಮ್ಮುಖದಲ್ಲಿ ಫಿರಂಗಿ ಸಿಡಿಸಿ ತಾಲೀಮು ನಡೆಸುವ ಪ್ರಕ್ರಿಯೆಗೆ ಚಾಲನೆ ನೀಡುವ ಸಲುವಾಗಿ ಫಿರಂಗಿ ಗಾಡಿಗಳಿಗೆ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪೂಜೆ ಸಲ್ಲಿಸಿದ್ದಾರೆ.

ದಸರಾ ಅಂಗವಾಗಿ ಕುಶಾಲ ತೋಪು ಸಿಡಿಸಲು ತಾಲೀಮು ನಡೆಸಲು ಫಿರಂಗಿ ಗಾಡಿಗಳಿಗೆ ಸಂಪ್ರದಾಯದಂತೆ ಅರಮನೆ ಆವರಣದಲ್ಲಿ ಸೋಮವಾರ ಮಧ್ಯಾಹ್ನ ಸಚಿವ ಎಸ್.ಟಿ.ಸೋಮಶೇಖರ್ ಅವರು ಕುಂಬಳಕಾಯಿ ಒಡೆಯುವ ಮೂಲಕ ಪೂಜೆ ಸಲ್ಲಿಸಿದರು. 11 ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಕೆಯಾಗಿದ್ದು ಸೆಪ್ಟೆಂಬರ್ ಮೊದಲ ವಾರದಲ್ಲಿ ಆನೆಗಳು, ಕುದುರೆಗಳ ಸಮ್ಮುಖದಲ್ಲಿ ಸಿಡಿಮದ್ದು ಸಿಡಿಸಿ ತಾಲೀಮು ನಡೆಸಲಾಗುತ್ತದೆ.

ವಿಜಯದಶಮಿಯಂದು ಅರಮನೆ ಬಳಿ ಪೊಲೀಸರು 21 ಬಾರಿ ಕುಶಾಲತೋಪು ಸಿಡಿಸುವ ಮೂಲಕ ಗೌರವ ಸಲ್ಲಿಸುತ್ತಾರೆ. ಆ ಸದ್ದಿಗೆ ಆನೆಗಳು,  ಕುದುರೆಗಳು ಬೆದರದೆ, ವಿಚಲಿತಗೊಳ್ಳದೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿ ಎಂಬ ಉದ್ದೇಶದಿಂದ ದಸರಾ ಆರಂಭಕ್ಕೂ ಮುನ್ನ ಫಿರಂಗಿಗಳ ಮೂಲಕ ಸಿಡಿಮದ್ದು ಸಿಡಿಸಿ ತಾಲೀಮು ನಡೆಸಲಾಗುತ್ತದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಡಿಸಿಪಿ ಗೀತಾ ಪ್ರಸನ್ನ ಎಂ.ಎಸ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

See also  ಅಮರಾವತಿ: ಶ್ರೀಲಂಕಾದವರಿಗಿಂತ ಆಂಧ್ರದ ಜನರಿಗೆ ಹೆಚ್ಚು ತಾಳ್ಮೆ ಇದೆ ಎಂದ ಎನ್.ಚಂದ್ರಬಾಬು ನಾಯ್ಡು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು