News Kannada
Wednesday, February 01 2023

ಮೈಸೂರು

ಮೈಸೂರು: ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ವಿ.ಎಸ್.ಉಗ್ರಪ್ಪ

V.S. Ugrappa attacks BJP leaders
Photo Credit : By Author

ಮೈಸೂರು: ಕೊಟ್ಟ ಮಾತಿನಂತೆ ನಡೆದುಕೊಳ್ಳದ, ವಾಗ್ದಾನಗಳನ್ನು ಈಡೇರಿಸದೆ ನಿಜವಾಗಿ ರಾಮನಿಗೆ ದ್ರೋಹ ಬಗೆದಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರಲ್ಲಿ ಮೋದಿಯವರು ನೀಡಿದ ವಾಗ್ದಾನಗಳಲ್ಲಿ ಯಾವುದನ್ನೂ ಈಡೇರಿಸಿಲ್ಲ. ಕಪ್ಪು ಹಣ ತರಲಿಲ್ಲ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಯಿತು. ಕೊಟ್ಟ ಮಾತಿನಂತೆ ನಡೆದುಕೊಳ್ಳದವರನ್ನು ಏನಂಥ ಕರೆಯಬೇಕೆಂದು ಕೇಳಿದರು. ಪತ್ನಿಯ ರಕ್ಷಣೆಗಾಗಿ ಶ್ರೀರಾಮಚಂದ್ರ ಲಂಕೆಯ ರಾವಣನ ವಿರುದ್ಧ ಯುದ್ಧ ಮಾಡಿದ. ಪಂಚಭೂತಗಳ ಸಾಕ್ಷಿಯಾಗಿ ವಿವಾಹವಾದ ನರೇಂದ್ರ ಮೋದಿ ತನ್ನ ಪತ್ನಿಗೆ ರಕ್ಷಣೆ ಕೊಡಲಿಲ್ಲ. ಮೋದಿ ರಾಮಾಯಣ ಓದಿದ್ದಾರೋ ಇಲ್ಲವೋ ತಿಳಿದಿಲ್ಲ. ನಿಜ ರಾಮನಿಗೆ ಅಪಚಾರ ಎಸಗಿದ್ದು ಮೋದಿ ಮತ್ತು ಅವರ ಪಕ್ಷ ಎಂದು ಟೀಕಿಸಿದರು.

ಕಾಂಗ್ರೆಸ್ಸಿಗರು ನಿಜವಾದ ಹಿಂದುಗಳು. ಆರ್‌ಎಸ್‌ಎಸ್, ಬಿಜೆಪಿ ಹಿಂದುತ್ವದ ವಿರೋಧಿಗಳು. ಹಿಂದುತ್ವ ತತ್ವ ಸರ್ವೇ ಜನಾಃ ಸುಖಿನೋ ಭವಂತು, ವಸುದೈವ ಕುಟುಂಬಕಂನಲ್ಲಿ ನಂಬಿಕೆ ಇದೆ. ಆದರೆ, ಸಂಘ ಪರಿವಾರ, ಬಿಜೆಪಿಯವರಿಗೆ ಮನುವಾದದಲ್ಲಿ ನಂಬಿಕೆ ಇದೆ. ಹಾಗಾಗಿ ಇವರು ಹಿಂದೂಗಳಲ್ಲಿ ಮನುವಾದಿಗಳು ಎಂದರು.

ಮೇಲ್ವರ್ಗದ ಬಡವರಿಗೆ ಶೇ.10 ಮೀಸಲು ಸಂವಿಧಾನ ಮತ್ತು ಅಂಬೇಡ್ಕರ್ ವಿಚಾರಕ್ಕೆ ದ್ರೋಹ ಎಸಗಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ಯಾವ ಆಧಾರದಲ್ಲಿ ಮೀಸಲು ಕೊಡಬೇಕೆಂದು ಸ್ಪಷ್ಟವಾಗಿ ಬರೆದಿದ್ದಾರೆ. ಅದರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲು ನೀಡಬೇಕೆಂದು ಇಲ್ಲ ಎಂದು ತಿಳಿಸಿದರು.

ಎಐಸಿಸಿ ಅಧಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಬಿಜೆಪಿಯವರು ಲಘುವಾಗಿ ಮಾತಾಡುವುದು ಶೋಭೆ ತರುವುದಿಲ್ಲ. ಸ್ವಾತಂತ್ರ್ಯ ಗಳಿಸಿಕೊಟ್ಟ ಪಕ್ಷವೊಂದರ ಅಧಕ್ಷರಾಗಿ ಸೈದ್ಧಾಂತಿಕವಾಗಿ ಯಾವ ರೀತಿ ಪಕ್ಷವನ್ನು ಮುನ್ನಡೆಸಬೇಕೆಂಬ ಶಕ್ತಿ ಖರ್ಗೆ ಅವರಿಗಿದೆ ಎಂದು ಹೇಳಿದರು.

See also  ಬಂಟ್ವಾಳ: ಜಾತಿ ನಿಂದನೆ ಮಾಡಿ ವ್ಯಕ್ತಿಯೋರ್ವನ ಮೇಲೆ ಹಲ್ಲೆ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು