News Kannada
Monday, March 04 2024
ಚಾಮರಾಜನಗರ

ಅಪ್ರಾಪ್ತೆ ಮೇಲೆ ದೌರ್ಜನ್ಯ ಎಸಗಿದ ಆರೋಪಿಗೆ ಜೈಲ್ ಶಿಕ್ಷೆ

Photo Credit : News Kannada

ಚಾಮರಾಜನಗರ : ಅಪ್ರಾಪ್ತೆಯನ್ನು ಗರ್ಭವತಿಯನ್ನಾಗಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಚಾಮರಾಜನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು 10 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಫು ನೀಡಿದ್ದಾರೆ.

ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದ ಚಂದ್ರ(29) ಶಿಕ್ಷೆಗೊಳಗಾದ ಅಪರಾಧಿ‌. ಈತನಿಗೆ ವಿವಾಹವಾಗಿ ಮೂರು ಮಕ್ಕಳಿದ್ದರೂ ಈತ ಕೆಲಸಕ್ಕೆ ಹೋಗುವಾಗ 17 ವರ್ಷದ ಬಾಲಕಿಯನ್ನು ಪರಿಚಯಿಸಿಕೊಂಡು ತನಗೆ ಮದುವೆಯಾಗಿರುವುದನ್ನು ಮುಚ್ಚಿಟ್ಟು ವಿವಿಧ ಆಮಿಷಗಳನ್ನು ತೋರಿಸಿ 2015ರ ನವೆಂಬರ್ನಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದ. ಅಷ್ಟೇ ಅಲ್ಲದೇ ಆಕೆಯ ಕೊರಳಿಗೆ ಅರಿಶಿಣ ದಾರವೊಂದನ್ನು ಕಟ್ಟಿ ಬಲವಂತದಿಂದ ಲೈಂಗಿಕ ಕ್ರಿಯೆ ನಡೆಸಿ ಗರ್ಭಿಣಿಯನ್ನಾಗಿಸಿದ್ದನು.

ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ಪ್ರಕರಣ ದಾಖಲಾಗಿ ಆರೋಪಿ ಚಂದ್ರನನ್ನು ಬಂಧಿಸಿ ಆತನ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಸಾಕ್ಷ್ಯಾಧಾರಗಳಿಂದ ಸಾಬೀತಾದ ಹಿನ್ನಲೆಯಲ್ಲಿ 10 ವರ್ಷ ಸಜೆ ಹಾಗೂ ಇದರಲ್ಲಿ 1 ತಿಂಗಳು ಕಠಿಣ ಶಿಕ್ಷೆ, 25 ಸಾವಿರ ರೂ. ದಂಡವನ್ನು ನೀಡಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಕೆ.ಯೋಗೇಶ್ ವಾದ ಮಂಡಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು