News Kannada
Wednesday, December 07 2022

ಚಾಮರಾಜನಗರ

ನಗರಸಭೆ ಸದಸ್ಯರ ಅನರ್ಹ ಪ್ರಕರಣ : ಆದೇಶ ಎತ್ತಿಹಿಡಿದ ಹೈಕೋರ್ಟ್

Photo Credit :

ಚಾಮರಾಜನಗರ: ಬಹುಜನ ಸಮಾಜ ಪಕ್ಷದ ವಿಪ್(ಬಿಎಸ್ಪಿ) ಉಲ್ಲಂಘಿಸಿ ಬಿಜೆಪಿ ಬೆಂಬಲಿಸಿದ್ದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರಸಭೆಯ 7ಮಂದಿ ಸದಸ್ಯರನ್ನು ಅನರ್ಹಗೊಳಿಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ತಮ್ಮನ್ನು ನಗರಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಬೇಕು ಎಂದು ಕೋರಿ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರಸಭೆ ಸದಸ್ಯರಾಗಿದ್ದ ಪವಿತ್ರ ಹಾಗೂ ಇತರ 6 ಮಂದಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಶನಿವಾರ ತೀರ್ಪು ಪ್ರಕಟಿಸಿರುವ ಹೈಕೋರ್ಟ್ , ಜಿಲ್ಲಾಧಿಕಾರಿ ಆದೇಶ ಎತ್ತಿ ಹಿಡಿದಿದೆ.

ಪ್ರಕರಣದ ಹಿನ್ನೆಲೆ : 2020 ರ ಅಕ್ಟೋಬರ್ 29 ರಂದು ಕೊಳ್ಳೇಗಾಲ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿತ್ತು . ಇದನ್ನು ಉಲ್ಲಂಘಿಸಿ ಬಿಎಸ್‌ಪಿ 7 ಮಂದಿ ಸದಸ್ಯರು ಬಿಜೆಪಿ ಪರ ಮತ ಚಲಾಯಿಸಿದ್ದರು. ಪಕ್ಷದ ವಿಪ್ ಉಲ್ಲಂಘಿಸಿದ್ದ ಸದಸ್ಯರನ್ನು ಹುದ್ದೆಯಿಂದ ಅನರ್ಹಗೊಳಿಸುವಂತೆ ಕೋರಿ ಬಿಎಸ್‌ಪಿ ನಗರಸಭೆ ಸದಸ್ಯೆ ಜಿ. ಜಯಮರಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ದೂರಿನ ವಿಚಾರಣೆ ನಡೆಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ಅವರು, ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ ( ಪಕ್ಷಾಂತರ ನಿಷೇಧ ) ಕಾಯ್ದೆ 1987 ರ ಅಡಿ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿ ಇದೇ ಸೆಪ್ಟೆಂಬರ್ 6 ರಂದು ಆದೇಶಿಸಿದ್ದರು.

ಜಿಲ್ಲಾಧಿಕಾರಿ ಆದೇಶದಿಂದ ನಗರಸಭೆ ಸದಸ್ಯ ಸ್ಥಾನ ಕಳೆದುಕೊಂಡ ಗಂಗಮ್ಮ, ನಾಗಮಣಿ, ನಾಗಸುಂದ್ರಮ್ಮ, ಪ್ರಕಾಶ್, ರಾಮಕೃಷ್ಣ, ನಾಸಿರ್ ಷರೀಫ್ ಹಾಗೂ ಪವಿತ್ರಾ ಹೈಕೋರ್ಟ್ ಮೆಟ್ಟಿಲೇರಿದ್ದರು.

 

See also  ರಾಮನ ಆಲಯಕ್ಕೆ ಚಾಮರಾಜನಗರದಿಂದ ಅಳಿಲು ಸೇವೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು