News Kannada
Thursday, September 29 2022

ಚಾಮರಾಜನಗರ

ಚಾಮರಾಜನಗರ: ಮಗಳ ಮೇಲೆ ಅತ್ಯಾಚಾರ ಎಸಗಿದ ಮಲತಂದೆ, ಆರೋಪಿ ಬಂಧನ - 1 min read

Photo Credit :

ಚಾಮರಾಜನಗರ : ಮಲತಂದೆಯೇ 5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಗರ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದೆ. ಆರೋಪಿಯ ವಿರುದ್ಧ ಆತನ ಹೆಂಡತಿ ದೂರು ನೀಡಿದ್ದಾರೆ. ಘಟನೆ ಎಸಗಿರುವ ಆರೋಪಿ ಬಾಲಕಿಯ ತಾಯಿಯ ಎರಡನೇ ಗಂಡನಾಗಿದ್ದಾನೆ. ಮೊದಲ ಗಂಡನ ಕಿರುಕುಳ ತಾಳಲಾರದೇ ಆತನಿಂದ ಎರಡು ವರ್ಷಗಳ ಹಿಂದೆ ಡೈವೋರ್ಸ್ ಪಡೆದಿದ್ದ ಮಹಿಳೆ ಆರೋಪಿಯೊಡನೆ ಮರು ವಿವಾಹವಾಗಿದ್ದರು. ಆಕೆಗೆ ಇಬ್ಬರು ಗಂಡು ಹಾಗೂ ಓರ್ವ ಹೆಣ್ಣು ಮಗಳಿದ್ದಾಳೆ.

ಆರೋಪಿ ಮೂಲತಃ ಮೈಸೂರಿನವನಾಗಿದ್ದು, ಈತ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಈತನ ಕಿರುಕುಳ ತಾಳಲಾರದೇ ಮಹಿಳೆ ನಗರದಲ್ಲಿರುವ ತಂದೆಯ ಮನೆಗೆ ಬಂದಿದ್ದರು. ಗಂಡನ ವಿರುದ್ಧ ಮಹಿಳಾ ಠಾಣೆಯಲ್ಲಿ ದೂರನ್ನೂ ನೀಡಿದ್ದರು. ಮಹಿಳಾ ಠಾಣೆ ಪೊಲೀಸರು ಆರೋಪಿಯನ್ನು ಕರೆಸಿ ಬುದ್ಧಿವಾದ ಹೇಳಿ ಕಳುಹಿಸಿದ್ದರು. ನಂತರ ಈರ್ವರೂ ನಗರದಲ್ಲೇ ಮನೆಮಾಡಿಕೊಂಡು ವಾಸಿಸುತ್ತಿದ್ದರು.

ಹೆಂಡತಿ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಮುಖ ತೊಳೆಯುತ್ತಿದ್ದ 5 ವರ್ಷದ ಮಲ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ತಾಯಿ ಮನೆಗೆ ಬಂದಾಗ ಮಗು ಅಳುತ್ತಿತ್ತು. ಮಗುವನ್ನು ವಿಚಾರಿಸಿದಾಗ ನಡೆದ ಘಟನೆ ವಿವರಿಸಿದೆ. ನಂತರ ಆಕೆ ಪಟ್ಟಣ ಠಾಣೆಗೆ ದೂರು ನೀಡಿದ್ದಾರೆ. ಪಟ್ಟಣ ಠಾಣೆ ಸಬ್ ಇನ್‌ಸ್ಪೆಕ್ಟರ್ ಮಹದೇವಶೆಟ್ಟಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಬಾಲಕಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ.

See also  ಒಡಹುಟ್ಟಿದ ತಂಗಿಯನ್ನೇ ಅತ್ಯಾಚಾರ ಮಾಡಿದ ಅಣ್ಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು