ಚಾಮರಾಜನಗರ: ವಿದ್ಯುತ್ ಸ್ಪರ್ಶಿಸಿ ಕಾಡಾನೆ ಮೃತಪಟ್ಟ ಘಟನೆ ಜಿಲ್ಲೆಯ ಯಳಂದೂರು ತಾಲ್ಲೂಕಿನ ಗೌಡಹಳ್ಳಿ ಗ್ರಾಮದ ಬಳಿ ನಡೆದಿದೆ. ಗ್ರಾಮದ ಮಹದೇವಪ್ಪ ಅವರ ಜಮೀನಿನಲ್ಲಿ 20 ವರ್ಷದ ಗಂಡು ಕಾಡಾನೆ ವಿದ್ಯುತ್ ಸ್ಪರ್ಶಕ್ಕೆ ಸಾವನ್ನಪ್ಪಿದೆ.
ವಿದ್ಯುತ್ ತಂತಿ ತುಂಡಾಗಿ ಸೋಲಾರ್ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪ್ರವಹಿಸುತ್ತಿದ್ದು, ಇದೇ ವೇಳೆ ಬಂದ ಕಾಡಾನೆ ಸ್ಪರ್ಶಿಸಿದೆ. ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದೆ. ಕಾಡಾನೆಯ ಸಾವಿಗೆ ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರೈತರು ಆರೋಪಿಸಿದ್ದಾರೆ.