ಚಾಮರಾಜನಗರ : ಮಾ.3ರಂದು ಮಹಾಶಿವರಾತ್ರಿ ಪ್ರಯುಕ್ತ ನಡೆಯಲಿರುವಂತ ಮಲೆ ಮಹಾದೇಶ್ವರ ಸ್ವಾಮಿಯ ಮಹಾರಥೋತ್ಸವಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧವನ್ನು ಜಿಲ್ಲಾಡಳಿತ ವಿಧಿಸಿದೆ. ಅಲ್ಲದೇ ಸ್ಥಳೀಯರಿಗೆ ಮಾತ್ರವೇ ಅವಕಾಶ ನೀಡಿದೆ.
ಈ ಕುರಿತಂತೆ ಜಿಲ್ಲಾಡಳಿತ ಹಾಗೂ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರವು ಆದೇಶ ಹೊರಡಿಸಿದ್ದು, ಮಾರ್ಚ್ 3ರಂದು ನಡೆಯಲಿರುವಂತ ಮಹಾರಥೋತ್ಸವಕ್ಕೆ ರಾಜ್ಯ ಸೇರಿದಂತೆ ಹೊರ ರಾಜ್ಯದಿಂದ ಭಕ್ತರು ಬರಲಿದ್ದಾರೆ. ಕೋವಿಡ್ ಕಾರಣದಿಂದಾಗಿ ಹೊರ ರಾಜ್ಯ, ರಾಜ್ಯದ ವಿವಿಧ ಜಿಲ್ಲೆಗಳ ಭಕ್ತರಿಗೆ ರಥೋತ್ಸವಕ್ಕೆ ಅವಕಾಶವಿಲ್ಲ ಎಂದು ತಿಳಿಸಿದೆ.
ಇದಷ್ಟೇ ಅಲ್ಲದೇ ಫೆ.27ರ ಇಂದಿನಿಂದ ಮಾರ್ಚ್ 2ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರು ತಂಗೋದಕ್ಕೂ ನಿರ್ಬಂಧಿಸಲಾಗಿದೆ. ಕೇವಲ ಮಹದೇಶ್ವರ ಬೆಟ್ಟ ವ್ಯಾಪ್ತಿಯಲ್ಲಿ ವಾಸಿಸುವಂತ ಸ್ಥಳೀಯರಿಗೆ ಮಾತ್ರವೇ ರಥೋತ್ಸವಕ್ಕೆ ಅವಕಾಶ ನೀಡಲಾಗಿದೆ.