News Kannada
Saturday, December 03 2022

ಚಾಮರಾಜನಗರ

ಮೂಲ ಸೌಕರ್ಯ ಕಾಮಗಾರಿಗಳ ಸಮರ್ಪಕ ನಿರ್ವಹಣೆಗೆ ಸೂಚನೆ

Photo Credit : News Kannada

ಚಾಮರಾಜನಗರ: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4ರ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳಿಗೆ ನಿಗದಿಪಡಿಸಲಾದ ಅನುದಾನಲ್ಲಿ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿರುವ ಸಮಿತಿ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4ರ ಯೋಜನೆಯಡಿ ಅನುದಾನ ಹಂಚಿಕೆಗೆ ಸಂಬಂಧಿಸಿದ ಕ್ರಿಯಾ ಯೋಜನೆ ಕುರಿತ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ನಗರೋತ್ಥಾನ ಯೋಜನೆಯಡಿ ರಸ್ತೆ, ಕುಡಿಯುವ ನೀರು, ಒಳಚರಂಡಿ, ವಿದ್ಯುತ್ ದೀಪ, ಸೇರಿದಂತೆ ಇತರೆ ಮೂಲ ಸೌಕರ್ಯ ಅಭಿವೃದ್ದಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಂಡು ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳಿಸುವಂತೆ ತಿಳಿಸಿದ್ದಾರೆ.

ಈ ಯೋಜನೆಯಡಿ ಗುಣಮಟ್ಟದ ಕೆಲಸಗಳನ್ನು ನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗಬಾರದು. ಜನರ ಅಗತ್ಯಕ್ಕೆ ಅನುಗುಣವಾಗಿ ಯೋಜನೆಯಡಿ ಕಾಮಗಾರಿ ನಿರ್ವಹಿಸಿ ಪ್ರಯೋಜನ ತಲುಪುವಂತೆ ನೋಡಿಕೊಳ್ಳಬೇಕೆಂದು ಸಚಿವರು ಸೂಚಿಸಿದ್ದಾರೆ. ಚಾಮರಾಜನಗರ, ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ಪುರಸಭೆ, ಹನೂರು, ಯಳಂದೂರಿನ ಪಟ್ಟಣ ಪಂಚಾಯಿತಿಗೆ ನಗರೋತ್ಥಾನದಡಿ ಕಾಮಗಾರಿ ನಿರ್ವಹಿಸಲು ಅನುದಾನ ಹಂಚಿಕೆ ಸಂಬಂಧ ವಿವರವಾಗಿ ಸಮಾಲೋಚಿಸಿದ ಸಚಿವರು ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಎಲ್ಲಾ ಪ್ರದೇಶಗಳ ಅಭಿವೃದ್ದಿಯು ಆಗಬೇಕು. ಕೊಳಚೆ ಪ್ರದೇಶಗಳಿಗೂ ಸಹ ಅವಶ್ಯಕ ಸೌಕರ್ಯಗಳನ್ನು ಒದಗಿಸಿ ಅಭಿವೃದ್ದಿಗೆ ನೆರವಾಗಬೇಕೆಂದು ಹೇಳಿದ್ದಾರೆ.

ಸಕಾಲ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವೀಕರಿಸಲಾಗಿರುವ ಅರ್ಜಿಗಳ ಕುರಿತು ಪರಾಮರ್ಶಿಸಿದ ಜಿಲ್ಲಾ ಉಸ್ತುವಾರಿ ಸಚಿವರು ನಿಯಮಾನುಸಾರ ಅರ್ಜಿಗಳ ವಿಲೇವಾರಿಯಾಗಬೇಕು. ಇನ್ನೂ ಮೂರು ದಿನಗಳೊಳಗೆ ಬಾಕಿ ಇರುವ ಅರ್ಜಿಗಳ ಬಗ್ಗೆ ತುರ್ತು ಗಮನಹರಿಸಿ ವಿಲೇವಾರಿ ಮಾಡಬೇಕು. ಈ ಕುರಿತ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನ್‍ಕುಮಾರ್, ಚಾಮರಾಜನಗರ ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ, ಕೊಳ್ಳೇಗಾಲ ನಗರಸಭೆ ಅಧ್ಯಕ್ಷರಾದ ಸುಶೀಲ, ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾದ ಆರ್. ಗಿರೀಶ್, ಯಳಂದೂರು ಪಟ್ಣಣ ಪಂಚಾಯಿತಿ ಅಧ್ಯಕ್ಷರಾದ ಆರ್.ಪ್ರಭಾವತಿ, ಹನೂರು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಚಂದ್ರಮ್ಮ, ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

See also  ಮಾದಪ್ಪನ ಹುಂಡಿಯಲ್ಲಿ 2 ಕೋಟಿ ಸಂಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು