News Kannada
Wednesday, November 30 2022

ಚಾಮರಾಜನಗರ

ಚಿಕ್ಕಪ್ಪನ ಕೊಂದು ಪರಾರಿಯಾಗಿದ್ದವರ ಬಂಧನ - 1 min read

Photo Credit : News Kannada

ಚಾಮರಾಜನಗರ: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಪ್ಪನನ್ನು ಕೊಂದು ಮರಕ್ಕೆ ನೇಣು ಹಾಕಿ ಪರಾರಿಯಾಗಿದ್ದ ಇಬ್ಬರು ಹಂತಕರನ್ನು ಬೇಗೂರು ಪೊಲೀಸರು ಬಂದಿಸಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ‌ ಗರಗನಹಳ್ಳಿ ಗ್ರಾಮದ ಶ್ರೀನಿಧಿ ಹಾಗೂ ಶ್ರೀನಿವಾಸ್ ಬಂಧಿತರು. ಇವರು ಕಳೆದ  ಹದಿನೈದು ದಿನಗಳ ಹಿಂದೆ ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿ ಗ್ರಾಮದ ಜಮೀನಿನಲ್ಲಿ ನಾಗೇಶ್ ಎಂಬಾತನನ್ನು ಕೊಲೆಗೈದು ಮರಕ್ಕೆ ನೇಣು ಹಾಕಿ ಪರಾರಿಯಾಗಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಸರ್ಕಲ್ ಇನ್ಸ್ ಪೆಕ್ಟರ್ ಲಕ್ಷ್ಮೀಕಾಂತ್ ನೇತೃತ್ವದ ಬೇಗೂರು ಪೊಲೀಸರು ತನಿಖೆ ನಡೆಸಿದ್ದರು. ಈ ವೇಳೆ ಆರೋಪಿಗಳು ನಾಗೇಶ್ ನನ್ನು ಕೊಲೆಗೈದು ಮರಕ್ಕೆ ನೇಣು ಹಾಕಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ತಲೆ ಮರೆಸಿಕೊಂಡಿದ್ದ ಆರೋಪಿಗಳಾದ ಶ್ರೀನಿಧಿ ಮತ್ತು ಶ್ರೀನಿವಾಸ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

See also  ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶವಿಲ್ಲ; ಸಚಿವ ಅಶ್ವತ್ಥನಾರಾಯಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು