ಗುಂಡ್ಲುಪೇಟೆ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿ ಮತ್ತೊಬ್ಬ ಗಂಬೀರ ಗಾಯಗೊಂಡಿರುವ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ರಾಘವಾಪುರ ಗೇಟ್ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಬೆಂಡರವಾಡಿ ಗ್ರಾಮದ ಮನು (23) ಸ್ಥಳದಲ್ಲಿಯೇ ಮೃತಪಟ್ಟರೆ ನಾಗರಾಜು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ
ಬೈಕ್ ನಲ್ಲಿ ಮನು ಮತ್ತು ನಾಗರಾಜ್ ತೆರಳುತ್ತಿದ್ದ ವೇಳೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ರಾಘವಾಪುರ ಗೇಟ್ ಬಳಿ ಕೇರಳ ಮೂಲದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಮನು ಸ್ಥಳದಲ್ಲಿಯೇ ಸಾವನ್ನಪ್ಪಿದರೆ ಮತ್ತೊಬ್ಬ ಸವಾರ ನಾಗರಾಜ್ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಆಗಮಿಸಿದ ಬೇಗೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.