News Kannada
Tuesday, February 07 2023

ಚಾಮರಾಜನಗರ

ಬಿಳಿಗಿರಿರಂಗನಬೆಟ್ಟದಲ್ಲಿ ಕರಿಚಿರತೆ ಪ್ರತ್ಯಕ್ಷ

Photo Credit : News Kannada

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಎರಡು ವರ್ಷಗಳ ಬಳಿಕ ಕರಿಚಿರತೆ ಪ್ರತ್ಯಕ್ಷವಾಗಿದ್ದು, ಈ ವಿಚಾರ ಪರಿಸರ ಪ್ರೇಮಿಗಳನ್ನು ಪುಳಕಗೊಳಿಸಿದೆ.

ಇದುವರೆಗೆ ಈ ಕರಿಚಿರತೆ  ಸಾರ್ವಜನಿಕರ ಕಣ್ಣಿಗೆ ಬಿದ್ದಿಲ್ಲವಾದರೂ ಈ ಹಿಂದೆ 2020 ರ ಆಗಸ್ಟ್‌ನಲ್ಲಿ ಬಿಆರ್‌ಟಿಯ ಬೈಲೂರು ವಲಯದಲ್ಲಿ ಕಪ್ಪು ಚಿರತೆ ಕ್ಯಾಮೆರಾ ಟ್ರ್ಯಾಪ್‌ನಲ್ಲಿ ಸೆರೆಯಾಗಿತ್ತು. ಅದೇ ವರ್ಷದ ಡಿಸೆಂಬರ್‌ನಲ್ಲಿ ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯದಲ್ಲೂ ಅರಣ್ಯ ಇಲಾಖೆ ಅಳವಡಿಸಿದ್ದ ಕ್ಯಾಮೆರಾ ಟ್ರ್ಯಾಪ್‌ನಲ್ಲಿ ಕರಿ ಚಿರತೆ ಕಂಡು ಬಂದಿತ್ತು .

ಈಗ ಹೊಳೆಮತ್ತಿ ನೇಚರ್‌ ಫೌಂಡೇಶನ್ ಡಾ.ಸಂಜಯ್ ಗುಬ್ಬಿ ಮತ್ತು ತಂಡದವರು ಬಿಳಿಗಿರಿರಂಗನಬೆಟ್ಟದಲ್ಲಿ ಚಿರತೆಗಳಿಗೆ ಸಂಬಂಧಿತ ಅಧ್ಯಯನಕ್ಕಾಗಿ ನಡೆಸಿದ್ದ ಕ್ಯಾಮರಾ ಟ್ರ್ಯಾಪ್‌ನಲ್ಲಿ ಮತ್ತೆ ಗೋಚರಿಸಿದೆ . ಡಿಸೆಂಬರ್ 2020 ರಲ್ಲಿ ಇದೇ ಗಂಡು ಚಿರತೆ ಮಲೈ ಮಹದೇಶ್ವರ ವನ್ಯಜೀವಿಧಾಮದ ಪಿ.ಜಿ.ಪಾಳ್ಯ ವಲಯದಲ್ಲಿ ಕಾಣಿಸಿಕೊಂಡಿತ್ತು . ಈ ಗಂಡು ಚಿರತೆಗೆ ಆರು ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ .

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಮತ್ತು ಮಲೆ ಮಹದೇಶ್ವರ ವನ್ಯಜೀವಿಧಾಮಗಳ ನಡುವೆ 1.6 ಕಿ.ಮೀ ಅಗಲದ ವನ್ಯಜೀವಿ ಕಾರಿಡಾರ್ ಇದೆ. ಈ ಎರಡೂ ವನ್ಯಧಾಮಗಳಲ್ಲಿ ಈ ಚಿರತೆಯ ಚಲನವಲನ ದಾಖಲಾಗಿರುವುದು ಈ ಕಾರಿಡಾರ್‌ನ ಮಹತ್ವವನ್ನು ಎತ್ತಿ ತೋರಿಸುತ್ತದೆ. ಹೀಗಾಗಿ ಈ ಕಾರಿಡಾರ್‌ನ ಸಂರಕ್ಷಿಸುವ ಅಗತ್ಯವಿದೆ. ಈ ಕಿರಿದಾದ ಕಾರಿಡಾರ್ ಮೂಲಕ ಕೊಳ್ಳೇಗಾಲ – ಹಾಸನೂರು ರಸ್ತೆ ( ರಾಜ್ಯ ಹೆದ್ದಾರಿ -38 )  ಹಾದು ಹೋಗುತ್ತದೆ ಮತ್ತು ರಸ್ತೆಯಲ್ಲಿನ ವಾಹನ ದಟ್ಟಣೆ ವನ್ಯಜೀವಿಗಳ ಓಡಾಟಕ್ಕೆ ಅಡ್ಡಿಯಾಗಿದೆ.

See also  ಒಂದೇ ವಾರಕ್ಕೆ ಎರಡು ಚಿರತೆಗಳ ಸೆರೆ: ಜನರಲ್ಲಿ ಆತಂಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು