News Kannada
Thursday, July 07 2022

ಚಾಮರಾಜನಗರ

ಚಾಮರಾಜನಗರ ಅಂಚೆ ಕಚೇರಿಯಲ್ಲಿ ಕನ್ನಡ ಜಾಗೃತಿ ಅಭಿಯಾನ - 1 min read

Photo Credit :

ಚಾಮರಾಜನಗರ : ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರದ ಅಧೀನ ಸಂಸ್ಥೆಗಳು ಕನ್ನಡ ನೆಲದಲ್ಲಿ ಜನಸಂಪರ್ಕ ಭಾಷೆಯಾಗಿರುವ ಕನ್ನಡಕ್ಕೆ ಸಂಬಂಧಿಸಿದ ಪ್ರಕಟಣೆಗಳನ್ನು ಕನ್ನಡದಲ್ಲಿ ಪ್ರಕಟಿಸಬೇಕು ಮತ್ತು ವ್ಯವಹರಿಸಬೇಕು ಎಂದು ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹನೂರು ಚನ್ನಪ್ಪ ಹೇಳಿದರು.

ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ವತಿಯಿಂದ ನಗರದ ಅಂಚೆ ಕಚೇರಿಯಲ್ಲಿ  ಹಮ್ಮಿಕೊಳ್ಳಲಾಗಿದ್ದ ಕನ್ನಡ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಆದ್ದರಿಂದ ಕಡ್ಡಾಯವಾಗಿ ಕನ್ನಡ ಬಳಕೆ ಮಾಡಬೇಕೆಂದು ಒತ್ತಾಯಿಸಿ ಮನವಿ ಪತ್ರ ನೀಡಿದರು.

ಅಂಚೆ ಕಚೇರಿ ಅಧೀಕ್ಷಕರಾದ ನಾಗರಾಜು ಮಾತನಾಡಿ, ರಾಜ್ಯ ಸರ್ಕಾರದ ಸೂಚನೆಯಂತೆ ನಾಮ ಫಲಕಗಳನ್ನು  ಕನ್ನಡದಲ್ಲಿಯೇ ಹಾಕಲಾಗಿದೆ ಎಂದರು.

ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಸಿಎಂ ನರಸಿಂಹಮೂರ್ತಿ ಮಾತನಾಡಿ ಡಾ. ರಾಜಕುಮಾರ್ ಅವರ ಜನ್ಮದಿನವನ್ನು  ಕನ್ನಡ ಅಭಿಮಾನಿಗಳ ದಿನವನ್ನಾಗಿ ಆಚರಿಸುತ್ತಿದ್ದು,  ಕನ್ನಡ ಜಾಗೃತಿ ಅಭಿಯಾನವನ್ನು ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಚೇರಿ ನೌಕರರು, ಉದ್ಯಮಿಗಳು, ವ್ಯಾಪಾರಸ್ಥರು ಸೇವಾವಲಯದ ನೌಕರರು, ಶ್ರೀಸಾಮಾನ್ಯರು, ಕನ್ನಡ  ಜಾಗೃತಿ ಅಭಿಯಾನದಲ್ಲಿ ಪ್ರೀತಿಯಿಂದ ಪಾಲ್ಗೊಳ್ಳಬೇಕು ಎಂದರು.

ಅಭಿಯಾನದಲ್ಲಿ ಪರಿಸರ ಪ್ರೇಮಿ ಸಿಎಂ ವೆಂಕಟೇಶ್, ಜಿಲ್ಲಾ ಪ್ರಗತಿಪರ ಸಂಘಟನೆಯ ಸಿಎಂ ಕೃಷ್ಣಮೂರ್ತಿ, ಕರ್ನಾಟಕ  ಜಾನಪದ ಪರಿಷತ್ತಿನ ತಾಲೂಕು ಅಧ್ಯಕ್ಷ ಕಲೆ ನಟರಾಜು ಮತ್ತಿತರರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಡಾ. ರಾಜಕುಮಾರ್  ಜನ್ಮದಿನದ  ಅಂಗವಾಗಿ ಕನ್ನಡ ಜಾಗೃತಿ ಅಭಿಯಾನದ ಭಿತ್ತಿಚಿತ್ರಗಳನ್ನು ಪ್ರದರ್ಶಿಸಲಾಯಿತು.

See also  ಮಲೆ ಮಹಾದೇಶ್ವರ ಸ್ವಾಮಿಯ ಮಹಾರಥೋತ್ಸವಕ್ಕೆ ಸ್ಥಳೀಯರಿಗೆ ಮಾತ್ರ ಅವಕಾಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು