News Kannada
Sunday, September 25 2022

ಚಾಮರಾಜನಗರ

ರಸ್ತೆ ಮಧ್ಯೆ ಕಾಡಾನೆಗಳು: ಸಂಚಾರ ಸ್ಥಗಿತ - 1 min read

Photo Credit : News Kannada

ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯೆದಲ್ಲಿ ಸಿಗುವ ಕೋಣನಕೆರೆ ಕ್ರಾಸ್ನಲ್ಲಿ ಕಾಡಾನೆಯೊಂದು ಮುಖ್ಯರಸ್ತೆಗೆ ಬಂದು ನಿಂತು ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡು, ಸವಾರರಲ್ಲಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

ರಸ್ತೆ ಬದಿಯಲ್ಲಿರುವ ಕುರುಚಲು (ಜುಜ್ಜಲು) ಗಿಡಮರಗಳನ್ನು ಮುರಿದು ಹಾಕುವ ದೃಶ್ಯ ಪ್ರಯಾಣಿಕರಿಗೆ ಕಂಡು ಬಂದಿತ್ತು. ಈ ದೃಶ್ಯವನ್ನು ದಾರಿಹೋಕರು ತಮ್ಮ ಮೊಬೈಲ್ ಮೂಲಕ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಕಾಡಿನಿಂದ ಮುಖ್ಯರಸ್ತೆಗೆ ಇಳಿದ ಕಾಡಾನೆ, ಅರ್ಧ ಗಂಟೆಗೂ ಹೆಚ್ಚುಕಾಲ ಹಿಂದೆ ಮುಂದೆ ಓಡಾಡಿ ವಾಹನ ಸವಾರರನ್ನು ಭಯಭೀತಗೊಳಿಸಿತ್ತು.

ರಸ್ತೆಯಲ್ಲಿದ್ದ ಬೈಕ್ ಕಡೆಗೆ ಆನೆ ತೆರಳುತ್ತಿದ್ದಂತೆ ಚಾಲಕ ಹಿಂದಕ್ಕೆ ಹೋಗಿದ್ದಾನೆ. ಅಲ್ಲಿಂದ ವಾಪಸಾಗುತ್ತಿದ್ದಂತೆ ಸ್ಥಳೀಯರ ಕಿರುಚಾಟಕ್ಕೆ ಆನೆ ಸ್ವಲ್ಪ ಗಾಬರಿಗೊಂಡಿತ್ತು. ಆದರೆ, ಈ ವೇಳೆ ಯಾವುದೇ ಅನಾಹುತ ಮಾಡಿಲ್ಲ. ಕಾಡಾನೆ ಕಾಣಿಸಿಕೊಳ್ಳುತ್ತಿದ್ದಂತೆ ಕೆಲವರು ಅಲ್ಲಿಂದ ದಿಕ್ಕಾಪಾಲಾಗಿ ಓಡಿದ್ದಾರೆ. ಇದರ ಮಧ್ಯೆ, ಎತ್ತ ಹೋಗಬೇಕೆಂಬುದು ತಿಳಿಯದೆ ಅತ್ತಿಂದಿತ್ತ, ಇತ್ತಿಂದತ್ತ ಓಡಾಡುತ್ತಿದ್ದ ಕಾಡಾನೆಯನ್ನು ಸ್ಥಳೀಯರು ಕೂಗಾಡಿ ಕಾಡಿಗೆ ಓಡಿಸುವ ಪ್ರಯತ್ನ ಮಾಡಿದರು. ಆದರೆ, ಅರ್ಧ ಗಂಟೆಯಾದ್ರೂ ಕಾಡಾನೆ ರಸ್ತೆಯಿಂದ ಕದಲಿರಲಿಲ್ಲ. ಸದ್ಯ ಕಾಡಾನೆಯಿಂದ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ. ಅದು ಕಾಡಿಗೆ ತೆರಳಿದ ಬಳಿಕ ವಾಹನ ಸವಾರರು ಸಂಚಾರ ಆರಂಭಿಸಿದ್ದಾರೆ. ಇದರ ನಡುವೆ ಮಲೆ‌ಮಹದೇಶ್ವರ ಬೆಟ್ಟದ ಮುಖ್ಯ ರಸ್ತೆಯಲ್ಲಿ ಮರಿಯಾನೆಗಳೊಂದಿಗೆ ಆನೆ ಹಿಂಡು ನಿಂತು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆಯೂ ನಡೆದಿದೆ.

See also  ಹೊಗೆನಕಲ್ ಫಾಲ್ಸ್ ಗೆ ಭೇಟಿ ನೀಡಿದ ಸುತ್ತೂರು ಶ್ರೀಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು