News Kannada
Saturday, October 01 2022

ಚಾಮರಾಜನಗರ

ಕೇರಳದ ಲಾಟರಿ ಮಾರುತ್ತಿದ್ದ ವ್ಯಕ್ತಿ ಬಂಧನ - 1 min read

Photo Credit :

ಚಾಮರಾಜನಗರ: ರಾಜ್ಯದಲ್ಲಿ ಲಾಟರಿ ಮಾರಾಟವನ್ನು ನಿಷೇಧಗೊಳಿಸಿದ್ದರೂ ಪಕ್ಕದ ಕೇರಳದಿಂದ ಲಾಟರಿ ಟಿಕೆಟ್ ತಂದು ಅಕ್ರಮವಾಗಿ ಮಾರಾಟ ಮಾಡುವ ಕೃತ್ಯಗಳು ನಡೆಯುತ್ತಿದ್ದು, ಇದನ್ನು ತಡೆಗಟ್ಟುವುದು ಕಷ್ಟವಾಗಿ ಪರಿಣಮಿಸಿದೆ.

ಒಂದಲ್ಲ ಒಂದು ಕಾರಣಕ್ಕೆ ಕೇರಳಕ್ಕೆ ತೆರಳುವ ಜನ ಅಲ್ಲಿ ಟಿಕೆಟ್ ಖರೀದಿಸಿ ತಂದು ಕೇರಳಕ್ಕೆ ಹೊಂದಿಕೊಂಡಂತೆ ಇರುವ ರಾಜ್ಯದ ಜಿಲ್ಲೆಗಳಲ್ಲಿ ಮಾರಾಟ ಮಾಡುತ್ತಿದ್ದಾರೆ.  ಇದನ್ನು ಮಟ್ಟಹಾಕಲು ಸಂಬಂಧಿಸಿದ ಇಲಾಖೆಗಳು ಪ್ರಯತ್ನ ಪಟ್ಟರೂ ಗೌಪ್ಯವಾಗಿ ನಡೆಯುತ್ತಲೇ ಇದ್ದು ಆಗೊಮ್ಮೆ ಈಗೊಮ್ಮೆ ಪ್ರಕರಣ ಬೆಳಕಿಗೆ ಬರುತ್ತಿದೆ.

ಇದೀಗ ಚಾಮರಾಜನಗರದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಳ್ಳೇಗಾಲ ಪಟ್ಟಣದ ಸಂತೇಬೀದಿಯ ಮನೋಜ್(23) ಎಂಬಾತನೇ ಬಂಧಿತ ಆರೋಪಿ. ಈತನ ಬಳಿಯಿದ್ದ 6,680 ಸಾವಿರ ಮೌಲ್ಯದ 167 ಕೇರಳ ರಾಜ್ಯದ ಲಾಟರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈತ ಸಂತೇಬೀದಿಯ ಸರ್ಕಲ್ ನಲ್ಲಿ 40 ರೂ. ಮುಖಬೆಲೆಯ ಕೇರಳ ಲಾಟರಿಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಪಟ್ಟಣದ ಪೊಲೀಸ್ ಠಾಣೆ ಪಿ.ಎಸ್.ಐ ಯಾದವಿ ಚೇತನ್ ಹಾಗೂ ಪೋಲಿಸ್ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

See also  ಒಂದು ವರ್ಷ ರಾಜಕೀಯ ಮಾಡಲ್ಲ: ಸಚಿವ ವಿ.ಸೋಮಣ್ಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು