News Kannada
Wednesday, September 27 2023
ಚಾಮರಾಜನಗರ

ಚಾಮರಾಜನಗರ: ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಸಿ ಭೇಟಿ

Chamarajanagar: DC visits flood-affected areas
Photo Credit : By Author

ಚಾಮರಾಜನಗರ: ಮಳೆ ಹಾಗೂ ತಾಲೂಕಿನ ಅವಳಿ ಜಲಾಶಯಗಳಿಂದ ನೀರಿನ ಹೊರ ಹರಿವು ಹೆಚ್ಚಳ ಹಿನ್ನೆಲೆಯಲ್ಲಿ ತೊಂದರೆಗೆ ಒಳಗಾದ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆ ಹಾಗೂ ಜಲಾಶಯಗಳ ನೀರಿನ ಹರಿವಿನಿಂದ ಉಂಟಾಗಿರುವ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಜಲಾವೃತವಾಗಿರುವ ಗ್ರಾಮಗಳು ಹಾಗೂ ಇನ್ನಿತರ ಭಾಗಗಳಲ್ಲಿ ಪರಿಹಾರ ಕಾರ್ಯಾಚರಣೆ ಕೈಗೊಳ್ಳಬೇಕು. ಅಗತ್ಯವಿರುವೆಡೆ ಅಗ್ನಿಶಾಮಕ ದಳ ಇನ್ನಿತರ ಸಿಬ್ಬಂದಿ ನೆರವಿನಿಂದ ನೀರು ತೆರವುಗೊಳಿಸುವ ಕಾರ್ಯವನ್ನು ಕೂಡಲೇ ನಿರ್ವಹಿಸಬೇಕು. ತೊಂದರೆಯಲ್ಲಿರುವ ಜನರ ನೆರವಿಗೆ ತುರ್ತಾಗಿ ಸ್ಪಂದಿಸುವಂತೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಕ್ಕೆ ಭೇಟಿ ಕೊಟ್ಟು ಪರಿಶೀಲಿಸಿದರು. ನೀರಿನ ಒಳ ಹರಿವು ಹಾಗೂ ಹೊರ ಹರಿವಿನ ಪ್ರಮಾಣದ ಬಗ್ಗೆ ನೀರಾವರಿ ಇಲಾಖೆ ಅಧಿಕಾರಿಗಳಿಂದ ವಿವರ ಪಡೆದುಕೊಂಡರು. ಅಗತ್ಯ ಮುಂಜಾಗ್ರತಾ ಕ್ರಮಗಳಿಗೆ ಕಾಲಕಾಲಕ್ಕೆ ತಕ್ಷಣವೇ ಮಾಹಿತಿ ಒದಗಿಸುವಂತೆ ಸೂಚಿಸಿದರು.

ನೀರು ನುಗ್ಗಿದ್ದ ಹರದನಹಳ್ಳಿಯ ಗ್ರಾಮ ಪಂಚಾಯಿತಿ ಕಚೇರಿ, ಅಂಚೆ ಕಚೇರಿ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ನೀರು ತೆರವುಗೊಳಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲವು ಮನೆಗಳು ಜಲಾವೃತವಾಗಿದ್ದ ಹಿನ್ನೆಲೆಯಲ್ಲಿ ಕಾಳಜಿ ಕೇಂದ್ರ ತೆರೆದು ಅಲ್ಲಿ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ತಹಶೀಲ್ದಾರ್, ಕಂದಾಯ ನಿರೀಕ್ಷಕರಿಗೆ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಣೆಯಿಂದ ಕೆಲವೆಡೆ ಜಲಾವೃತವಾಗಿರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು ತಕ್ಷಣವೇ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದ ಅಧಿಕಾರಿಗಳಿಗೆ ನಿರ್ದೇಶನ ನೀಡಿ ಎಲ್ಲಿ ತೊಂದರೆಯಾಗಿದೆಯೋ ಅಂತಹ ಕಡೆ ಸರಿಪಡಿಸುವಂತೆ ಸೂಚಿಸುವುದಾಗಿ ಸ್ಥಳೀಯರಿಗೆ ತಿಳಿಸಿದರು.

ಕೋಡಿಮೋಳೆ ಗ್ರಾಮದಲ್ಲಿ ಜನರ ಅಹವಾಲುಗಳನ್ನು ಆಲಿಸಿ ಅಲ್ಲಿನ ಜಲಾವೃತ ಪ್ರದೇಶಗಳನ್ನು ವೀಕ್ಷಣೆ ಮಾಡಿದರು. ಹಲವರನ್ನು ಹಾಗೂ ಜಾನುವಾರುಗಳನ್ನು ಅಲ್ಲಿನ ಸಮುದಾಯ ಭವನಕ್ಕೆ ಸ್ಥಳಾಂತರ ಮಾಡಿರುವ ಬಗ್ಗೆ ವಿವರ ಪಡೆದುಕೊಂಡರು. ಕಾಳಜಿ ಕೇಂದ್ರದಲ್ಲಿ ಊಟ, ಉಪಹಾರ, ಕುಡಿಯುವ ನೀರು ಸೇರಿದಂತೆ ಎಲ್ಲಾ ಬಗೆಯ ಸೌಕರ್ಯಗಳಿಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.

ನಾಗವಳ್ಳಿ ಗ್ರಾಮಕ್ಕೂ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿಯವರು ಅಲ್ಲಿನ ಸೇತುವೆ ಇನ್ನಿತರ ಪ್ರದೇಶಗಳನ್ನು ವೀಕ್ಷಿಸಿದರು. ನೀರು ತೆರವುಗೊಳಿಸುವ ಕಾರ್ಯದ ಬಗ್ಗೆ ಪರಿಶೀಲಿಸಿದರು. ಜ್ಯೋತಿಗೌಡನಪುರ ಹಾಗೂ ಇನ್ನಿತರ ಭಾಗಗಳಿಗೂ ಭೇಟಿ ಕೊಟ್ಟು ವಿವರವಾಗಿ ಪರಿಶೀಲಿಸಿದರು. ಜನರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು. ಗ್ರಾಮದ ಜನರ ಸುರಕ್ಷತೆಗೆ ಸದಾ ಸನ್ನದ್ಧರಾಗಿರಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರಿಗಳಿಗೆ ತಿಳಿಸಿದರು.

ತಹಶೀಲ್ದಾರ್ ಬಸವರಾಜು, ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್, ಸಹಾಯಕ ಎಂಜಿನಿಯರ್ ಮಹದೇವಸ್ವಾಮಿ, ಕಂದಾಯ ಇಲಾಖೆಯ ಅಧಿಕಾರಿಗಳು, ಆಯಾ ಭಾಗದ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಇದ್ದರು.

See also  ಎಂಎಂ ಹಿಲ್ಸ್ ವಸತಿಗೃಹದಲ್ಲಿದ್ದ ಕುಟುಂಬವನ್ನು ಖಾಲಿ ಮಾಡಿಸಿದ ಅಧಿಕಾರಿಗಳು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು