News Kannada
Wednesday, November 30 2022

ಚಾಮರಾಜನಗರ

ಚಾಮರಾಜನಗರ: ಗಮನ ಸೆಳೆದ ರೈತ ದಸರಾ ಮಹೋತ್ಸವ - 1 min read

Photo Credit : By Author

ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ರೈತ ದಸರಾ ಮೆರವಣಿಗೆಯಲ್ಲಿ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದ ಎತ್ತಿನ ಬಂಡಿಗಳು ನಾಗರಿಕರ ಗಮನಸೆಳೆದವು.

ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ರೈತ ದಸರಾ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಎತ್ತಿನ ಬಂಡಿಗಳ ಮೆರವಣಿಗೆಗೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಹಾಗೂ ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು, ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಎಂ. ಗಾಯತ್ರಿ ಅವರು ಹಸಿರು ನಿಶಾನೆ ತೋರಿದರು.

ಚಾಮರಾಜೇಶ್ವರ ದೇವಾಲಯದ ಮುಂಭಾಗದಿಂದ ಹೊರಟ ಮೆರವಣಿಗೆ ಸಾಂಸ್ಕೃತಿಕ ಕಲಾತಂಡಗಳಾದ ಡೊಳ್ಳುಕುಣಿತ, ನಗಾರಿ, ಡಮರುಗ, ಬ್ಯಾಂಡ್‌ಸೆಟ್ ಕಲಾವಿದರೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಮುಕ್ತಾಯಗೊಂಡಿತು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರೈತ ದಸರಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಳ್ಳುವ ಮೂಲಕ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದ ಜಿಲ್ಲೆಯ ಪ್ರಗತಿಪರ ರೈತರು ಇತರೆ ರೈತರಿಗೂ ಪ್ರೇರಣೆಯಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ ಅವರು ಮಾತನಾಡಿ ದಸರಾ ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ರೈತರಿಗೆ ಅನುಕೂಲವಾಗುವಂತಹ ಚಿಂತನಾ ಕಾರ್ಯಕ್ರಮಗಳನ್ನು ಏರ್ಪಡಿಸಬೇಕಾಗಿದೆ. ಕೃಷಿಕ್ಷೇತ್ರದಲ್ಲಿ ರೈತರನ್ನು ಹೆಚ್ಚಾಗಿ ತೊಡಗುವಂತೆ ಪ್ರೇರೇಪಿಸುವುದು ರೈತ ದಸರಾ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ವೇದಿಕೆ ಕಾರ್ಯಕ್ರಮದ ಬಳಿಕ ರೈತರಿಗೆ ಜೇನುಕೃಷಿ, ಮಣ್ಣಿನ ಫಲವತ್ತತೆ ಹಾಗೂ ಸಾವಯವ ಕೃಷಿ ಪದ್ದತಿ ಬಗ್ಗೆ ತಾಂತ್ರಿಕ ಕಾರ್ಯಾಗಾರ ನಡೆಯಿತು.

See also  ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು