News Kannada
Tuesday, February 07 2023

ಚಾಮರಾಜನಗರ

ಚಾಮರಾಜನಗರ: ಜ.20 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ

Chamarajanagar: District-level job fair to be held on Jan. 20
Photo Credit : Pixabay

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ  ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜನವರಿ 20ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ಏರ್ಪಡಿಸಲಾಗಿದೆ.

ನಂಜನಗೂಡು, ಮೈಸೂರು ಹಾಗೂ ಬೆಂಗಳೂರಿನ ಖಾಸಗಿ ಕಂಪನಿಗಳಲ್ಲಿ ಮಾರುಕಟ್ಟೆ ಸೇವೆಗಳು, ಹಣಕಾಸು, ಇನ್ಸೂರೆನ್ಸ್, ಕೈಗಾರಿಕಾ, ಬ್ಯಾಂಕಿಂಗ್ ಮತ್ತು ಆಸ್ಪತ್ರೆ ಸೇವೆಗಳು ಹಾಗೂ ಇತರೆ ಎಲ್ಲಾ ರೀತಿಯ ಸೇವೆಗಳ ಸುಮಾರು 25ಕ್ಕೂ ಹೆಚ್ಚಿನ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ ಹಾಗೂ ಡಿಪ್ಲೊಮಾ, ನರ್ಸಿಂಗ್, ಜಿ.ಡಿ.ಎ ಮತ್ತು ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯುಳ್ಳ 18 ರಿಂದ 35 ವರ್ಷ ವಯೋಮಿತಿಯೊಳಗಿನ ಪುರುಷ ಮತ್ತು ಮಹಿಳಾ ನಿರುದ್ಯೋಗಿಗಳು ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರಗಳನ್ನೊಳಗೊಂಡ ಕನಿಷ್ಠ 10 ಪ್ರತಿಗಳೊಂದಿಗೆ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನಕ್ಕೆ ಹಾಜರಾಗುವ ಮೊದಲು ನೊಂದಣಿ ಕೌಂಟರ್‌ನಲ್ಲಿ ಕಡ್ಡಾಯವಾಗಿ ನೊಂದಣಿಯಾಗಬೇಕು. ಜೊತೆಗೆ https://skillconnect.kaushalkar. com/candidatereg ಲಿಂಕ್ ಮೂಲಕವು ಸಹ ನೊಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಥವಾ ದೂ.ಸಂ 08226-295080, ಮೊ.ಸಂ 7892190137, 8884865299, 9900677922 ಸಂಪರ್ಕಿಸುವAತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಎ. ಮಹಮ್ಮದ್ ಅಕ್ಬರ್ ತಿಳಿಸಿದ್ದಾರೆ.

See also  ಚಾಮರಾಜನಗರ: ರಸ್ತೆ ಅಗಲೀಕರಣಗೊಳಿಸುವಂತೆ ಪತ್ರ ಬರೆದ ಶಾಸಕ, ಪರಿಸರವಾದಿಗಳಿಂದ ಟೀಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು