ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾ ಯೋಜನೆಗೆ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಏಪ್ರಿಲ್ 9ರಂದು ಪ್ರಧಾನಮಂತ್ರಿಯವರು ಬಂಡೀಪುರಕ್ಕೆ ಭೇಟಿ ನೀಡುತ್ತಿರುವುದರಿಂದ ರಸ್ತೆ ನಿರ್ವಹಣೆ ಹಾಗೂ ಇತರೆ ಪೂರ್ವ ಸಿದ್ದತೆ ಮಾಡಿಕೊಳ್ಳುವ ಸಲುವಾಗಿ ಮತ್ತು ರಕ್ಷಣಾ ಹಿತದೃಷ್ಠಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.
ಈ ಸಂಬಂಧ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಾರ್ವಜನಿಕರಿಗೆ ಸಫಾರಿಯನ್ನು ಏಪ್ರಿಲ್ 6ರಿಂದ 9ರವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬರುವ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್‌ಗಳಲ್ಲಿ ಪ್ರವೇಶ ಹಾಗೂ ತಂಗುವಿಕೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.