ಚಾಮರಾಜನಗರ: ಕರ್ನಾಟಕ ತಮಿಳುನಾಡು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು, ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರೆ ಬೆತ್ತಲೆಯಾಗಿ ಉರುಳು ಸೇವೆ ಮಾಡಿದ ಘಟನೆ ನಡೆದಿದೆ.
ಚಾಮರಾಜನಗರದ ಶ್ರೀ ಚಾಮರಾಜೇಶ್ವರ ಉದ್ಯಾನವನದಿಂದ ಶ್ರೀ ಭುವನೇಶ್ವರಿ ವೃತ್ತದ ತನಕ ಮೆರವಣಿಗೆಯಲ್ಲಿ ಬಂದ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರೆ ಬೆತ್ತಲಾಗಿ ಉರುಳು ಸೇವೆಗೆ ಮುಂದಾದರು.
ಒಂದು ಕಡೆ ಕಾವೇರಿ ನೀರು ಹಂಚಿಕೆ ನಿರ್ವಾಹಣ ಪ್ರಾಧಿಕಾರ ಮತ್ತು ಸುಪ್ರಿಂ ಕೋರ್ಟ್ ನಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಕಾಂಗ್ರೇಸ್ ಮತ್ತು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ರಾಜ್ಯದ ಹಿತಕ್ಕಿಂತ ರಾಜಕಾರಣವೇ ಮುಖ್ಯವಾಗಿ ಪರಿಣಮಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರವು ಮದ್ಯ ಪ್ರವೇಶ ಮಾಡಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.