ಚಾಮರಾಜನಗರ: ಶುಕ್ರವಾರ ಅಖಂಡ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಜಿಲ್ಲಾಡಳಿತ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರೂ ಸಹ , ಚಾಮರಾಜನಗರ ಮೆಡಿಕಲ್ ನರ್ಸಿಂಗ್ ಕಾಲೇಜಿಗೆ ಅಲ್ಲಿನ ಪ್ರಾಂಶುಪಾಲರು ರಜೆ ನೀಡಿದ ಕಾರಣ ನರ್ಸಿಂಗ್ ವಿದ್ಯಾರ್ಥಿಗಳು ಕಾಲೇಜಿಗೆ ಬಂದ ಘಟನೆ ನಡೆದಿದೆ.
ಚಾಮರಾಜನಗರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಬಳಿ ಬಸ್ ಗಾಗಿ ನರ್ಸಿಂಗ್ ವಿದ್ಯಾರ್ಥಿಗಳು ಕಾಯುತ್ತಿರುವಾಗ ಸ್ಥಳಕ್ಕೆ ಬಂದ ಕನ್ನಡ ಚಳವಳಿಗಾರರು ಕಾಲೇಜಿಗೆ ರಜೆ ಇದೆಯಲ್ಲ ಎಂದು ಕೇಳಿದಾಗ ಪ್ರಾಂಶುಪಾಲರು ರಜೆ ನೀಡಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದಾಗ ಪ್ರತಿಭಟನೆಗೆ ಇಳಿದ ಹೋರಾಟಗಾರರು ಕಾಲೇಜಿನ ಪ್ರಾಂಶುಪಾಲರ ವಿರುದ್ದ ಘೋಷಣೆ ಕೂಗಿದರು.
ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಿ ಕಾಲೇಜಿನ ಬಸ್ ಹಾಗೂ ಆಂಬುಲೆನ್ಸ್ ಮೂಲಕ ನರ್ಸಿಂಗ್ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ನಿಲಯಗಳಿಗೆ ಕಳುಹಿಸಲಾಯಿತು.