News Kannada
Saturday, February 24 2024
ಮೈಸೂರು

ಬೆಂಗಳೂರಿನಲ್ಲಿ ಉಚಿತ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ

Photo Credit :

ಮೈಸೂರು: ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಮೆಡ್ಟ್ರಾನಿಕ್ಸ್, ಅಮೆರಿಕಾ ಹಾಗೂ ಡಾ. ಗೋವಿಂದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್, ವಿಸ್ಕಿನ್ ಸನ್, ಅಮೇರಿಕಾರವರ ಸಹಯೋಗದೊಂದಿಗೆ 150 ರೋಗಿಗಳಿಗೆ ಆಂಜಿಯೋಪ್ಲಾಸ್ಟಿ ಕಾರ್ಯಾಗಾರವನ್ನು ಜೂ.24 ರಿಂದ 26ರವರೆಗೆ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ನಿರ್ದೇಶಕ ಪದ್ಮಶ್ರೀ ಡಾ. ಸಿ.ಎನ್. ಮಂಜುನಾಥ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಕಾರ್ಯಾಗಾರವನ್ನು 150 ಜನ ಬಡರೋಗಿಗಳು ಹಾಗೂ ಬಡತನದ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗಾಗಿ  ಆಯೋಜಿಸಲಾಗಿದೆ.

ಪ್ರತಿ ರೋಗಿಗೂ ಉನ್ನತ ಮಟ್ಟದ ಮೆಡಿಕೇಟೆಡ್ ಸ್ಟಂಟ್ಗಳನ್ನು ಉಚಿತವಾಗಿ ಅಳವಡಿಸಲಾಗುವುದು. ಈ ಸೌಲಭ್ಯವನ್ನು ಈಗಾಗಲೇ ಆಂಜಿಯೋಗ್ರಾಮ್ ತಪಾಸಣೆಗೆ  ಒಳಪಟ್ಟಿರುವ ರೋಗಿಗಳು ಪಡೆಯಬಹುದು.

ಅವಶ್ಯಕವಿರುವ ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ಅಥವಾ ಕಡಿಮೆ ಆದಾಯ ಪ್ರಮಾಣಪತ್ರವನ್ನು ಹೊಂದಿರಬೇಕು ಎಂದು ತಿಳಿಸಿದ ಅವರು ತಮ್ಮ ಹೆಸರನ್ನು ೨೦ನೇ ಜೂನ್ ಒಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ನಿರ್ದೇಶಕರ ಕಛೇರಿ, ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್, ಬೆಂಗಳೂರು ಇಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 9480827888 ಅಥವಾ 080-22977433 / 322 ನ್ನು ಸಂಪರ್ಕಿಸಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು