News Karnataka Kannada
Friday, April 26 2024
ಹಾಸನ

ಹಾಸನ: ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರ ಬಂಧನ

Arrest 22082021
Photo Credit :

ಹಾಸನ: ನಗರದ ಮನೆಯೊಂದರ ರೂಮಿನಲ್ಲಿ ಅಕ್ರಮವಾಗಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರು ಬಡಾವಣೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

ವಲ್ಲಭಾಯಿ ರಸ್ತೆಯ ಮಿಥುನ್, ದೊಡ್ಡಕೊಂಡಗುಳದ ಕೃಷ್ಣೇಗೌಡ, ಸಾಲಗಾಮೆ ರಸ್ತೆಯ ಪೂರ್ವಿಕ್ ಮತ್ತು ಆದರ್ಶನಗರದ ಪ್ರವೀಣ್‌ಕುಮಾರ್ ಬಂಧಿತ ಆರೋಪಿಗಳು. ಇವರಿಂದ ಸುಮಾರು 98 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಅ.18 ರಂದು ಸಂಜೆ 6 ಗಂಟೆ ಸಮಯದಲ್ಲಿ ನಗರದ ಪಿಡಬ್ಲ್ಯೂಡಿ ಕಾಲೋನಿಯ ಸುಬ್ಬೇಗೌಡ ಎಂಬುವರ ಮನೆಯ ಮೊದಲ ಮಹಡಿಯಲ್ಲಿರುವ ರೂಮೊಂದರಲ್ಲಿ ನಾಲ್ವರು ಅಕ್ರಮವಾಗಿ ಗಾಂಜಾ ಸೇವನೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ ಬಡಾವಣೆ ಠಾಣೆಯ ಸಿಪಿಸಿ ಲೋಹಿತ್ ಎನ್. ಹಾಗೂ ಇತರರು ದಾಳಿ ಮಾಡಿದರು.

ಈ ವೇಳೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದವರನ್ನು ವಶಕ್ಕೆ ಪಡೆದು ಅವರ ಬಳಿಯಿದ್ದ ಗಾಂಜಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು