News Kannada
Friday, December 02 2022

ಹಾಸನ

ತಿಂಗಳ ನಂತರ ಶಿರಾಡಿ ಘಾಟ್‌ ನಲ್ಲಿ ವಾಹನ ಸಂಚಾರಕ್ಕೆ ಅನುಮತಿ

Photo Credit :

ಹಾಸನ: ಕಳೆದ ಒಂದು ತಿಂಗಳಿನಿಂದ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದ ಶಿರಾಡಿ ಘಾಟ್​ನಲ್ಲಿ ಮತ್ತೆ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕಾರು, ಜೀಪು, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು, ಸಾರಿಗೆ ಬಸ್ ಗಳು, 20 ಟನ್ ಸಾಮರ್ಥ್ಯದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅವಕಾಶ ನೀಡಿ ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶಿಸಿದ್ದಾರೆ. ಆದರೆ ಬುಲೆಟ್ ಟ್ಯಾಂಕರ್ಸ್, ಕಂಟೇನರ್ ಹಾಗು ಬೃಹತ್ ವಾಹನಗಳಿಗೆ ಸಂಚಾರ ನಿಷೇಧ ಮುಂದುವರೆಯಲಿದೆ. ಭಾರಿ ಮಳೆಯಿಂದ ದೋಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ75 ರಲ್ಲಿ ರಸ್ತೆ ಕುಸಿತವಾಗಿತ್ತು. ಈ ಕಾರಣದಿಂದ ಕಳೆದ ಒಂದು ತಿಂಗಳಿನಿಂದ ಶಿರಾಡಿ ಘಾಟ್​ನಲ್ಲಿ ವಾಹನ ಸಂಚಾರಕ್ಕೆ ನಿಷೇಧ ವಿಧಿಸಲಾಗಿತ್ತು.
ರಾಷ್ಟ್ರೀಯ ಹೆದ್ದಾರಿ 75ರ ದೋಣಿಗಲ್ ಬಳಿ ರಸ್ತೆಯ ಒಂದು ಕಡೆ ಕುಸಿದುಹೋಗಿರುವುದರಿಂದ ಶಿರಾಡಿ ಘಾಟ್​ನಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು. ಬೆಂಗಳೂರು, ಹಾಸನ ಮಾರ್ಗದಿಂದ ಮಂಗಳೂರು ಅಥವಾ ದಕ್ಷಿಣ ಕನ್ನಡಕ್ಕೆ ತೆರಳುವವರು ಶಿರಾಡಿ ಘಾಟ್ ಬದಲಾಗಿ ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್​ನಲ್ಲಿ ತೆರಳಲು ಸೂಚಿಸಲಾಗಿತ್ತು. ಬೆಂಗಳೂರಿನಿಂದ ಮೂಡಿಗೆರೆ- ಕೊಟ್ಟಿಗೆಹಾರ ಮಾರ್ಗದ ಮೂಲಕ ಚಾರ್ಮಾಡಿ ಘಾಟ್​ನಲ್ಲಿ ಮಂಗಳೂರಿಗೆ ತೆರಳಲು ಸೂಚಿಸಲಾಗಿತ್ತು.

See also  ನಟ ಪುನೀತ್​ ರಾಜ್​ಕುಮಾರ್ ಅಗಲಿಕೆ ನೋವನ್ನು ತಾಳಲಾರದೆ ಖಿನ್ನತೆಗೆ ಒಳಗಾಗಿದ್ದ ಅಭಿಮಾನಿ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು