News Kannada
Thursday, December 08 2022

ಹಾಸನ

ದರೋಡೆಕೋರರ ಬಂಧನ,7 ಲಕ್ಷ ಮೌಲ್ಯದ ಚಿನ್ನಾಭರಣ ವಶ

gold jewellery
Photo Credit :

ಹಾಸನ: ಜಿಲ್ಲೆಯ ವಿವಿಧೆಡೆ ನಡೆದಿದ್ದ ಐದು ಮನೆ ಕಳವು ಪ್ರಕರಣ ಭೇದಿಸಿರುವ ಜಿಲ್ಲಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ₹ 7 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶಪಡಿಸಿ ಕೊಂಡಿದ್ದಾರೆ.

ಬೇಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಮನೆ ಕಳ್ಳತನ ಪ್ರಕರಣದಲ್ಲಿ ಕೋಲಾರ ಜಿಲ್ಲೆಯ ನರಸಾಪುರ ಗ್ರಾಮದ ವ್ಯಕ್ತಿಯನ್ನು ಬಂಧಿಸಿ, 50 ಗ್ರಾಂ ಚಿನ್ನಾಭರಣ, ಎಲ್‌ಇಡಿ ಟಿವಿ ಹಾಗೂ ಶಾಂತಿ ಗ್ರಾಮ ಠಾಣಾ  ವ್ಯಾಪ್ತಿಯ ಕರಿಗೌಡನ ಕೊಪ್ಪಲು ಗ್ರಾಮದ ಮಂಜುನಾಥ್‌ ಅವರ ಮನೆ ಕಳ್ಳತನ ಪ್ರಕರಣ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ, ₹ 6 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸಗೌಡ ಹೇಳಿದರು.

ಏ.17ರಂದು ಕರಿಗೌಡನ ಕೊಪ್ಪಲು ಗ್ರಾಮ ಮಂಜುನಾಥ್ ಅವರ ಮನೆಯ ಮದುವೆ ಸಮಾರಂ ಭಕ್ಕೆ ಬಂದಿದ್ದ ವರಲಕ್ಷ್ಮೀ ಅವರ ಬ್ಯಾಗ್‌ನಲ್ಲಿದ್ದ ₹ 97 ಸಾವಿರ ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಶಾಂತಿ ಗ್ರಾಮ ಪೊಲೀಸರು, ಅ. 3ರಂದು ಹಾಸನ ರೈಲ್ವೆ ನಿಲ್ದಾಣ ಬಳಿ ಅನುಮಾನಾಸ್ಪದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ದಾಗ, ದುದ್ದ ಠಾಣೆಯ 1 ಮತ್ತು ಹಾಸನ ಬಡಾವಣೆಯ ಎರಡು ಮನೆ ಯಲ್ಲಿ ಕಳವು ಮಾಡಿರುವುದಾಗಿ ಒಪ್ಪಿ ಕೊಂಡಿದ್ದಾನೆ ಎಂದು ವಿವರಿಸಿದರು.

See also  ಹೆಚ್.ಡಿ.ಕೆ ಹಿರಿಯ ನಾಯಕರ ವಿರುದ್ದ ಆತುರದ ಹೇಳಿಕೆ ಸಲ್ಲ : ಅರುಣ್ ಸಿಂಗ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು