ಹಾಸನ: ಜಿಲ್ಲೆಯ ಅಲ್ಪಸಂಖ್ಯಾತ ವಸತಿ ಶಾಲೆಯೊಂದರ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಶಾಲೆಗಳನ್ನು ನಡೆಸುವಂತೆ ಸರ್ಕಾರ ಸೂಚನೆ ನೀಡಿತ್ತು.
ದೀಪಾವಳಿ ಹಬ್ಬಕ್ಕೆಂದು ಮನೆಗೆ ಹೋಗಿ ಮತ್ತೆ ಶಾಲೆಗೆ ವಾಪಸ್ಸಾದ ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿದ್ದು ಶಾಲಾ ಸಿಬ್ಬಂದಿ ಹಾಗೂ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಶಾಲೆಯಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಜರ್ ಹಾಗೂ ಸಾಮಾಜಿಕ ಆಂತರ ಹೀಗೆ ಕೊರೊನಾ ನಿಯಮಗಳನ್ನು ಶಾಲೆಯ ಆಡಳಿತ ಮಂಡಳಿ ಅನುಸರಿಸದೆ ಇದ್ದರೆ ಶಾಲಾಧಿಕಾರಿಗಳ ವಿರುದ್ಧ ಕ್ರಮವಾಗಲಿದೆ.ಈಗಾಗಲೇ ಅರಕಲಗೂಡು ಶಾಸಕ ಎ.ಟಿ ರಾಮುಸ್ವಾಮಿ ಮಕ್ಕಳ ಆರೋಗ್ಯ ಸ್ಥಿತಿ ಬಗ್ಗೆ ವಿಚಾರಣೆ ನಡೆಸಿದ್ದಾರೆ.