News Kannada
Sunday, August 14 2022

ಹಾಸನ

‘ಅಮ್ಮಾ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ಎಂದು ತಾಯಿಗೆ ಮೆಸೇಜ್‌ ಕಳುಹಿಸಿ ಬಾಲಕಿ ಆತ್ಮಹತ್ಯೆ - 1 min read

ಹಾಸನ: ‘ಅಮ್ಮಾ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸು’ ಎಂದು ತಾಯಿಗೆ ಮೊಬೈಲ್‌ನಲ್ಲಿ ಮೆಸೇಜ್‌ ಕಳುಹಿಸಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಪೂರ್ವಿಕಾ ಎಂಬ 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿಗೆ ಮೆಸೇಜ್‌ ಮಾಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಗೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಾಸನದ ಖಾಸಗಿ ಶಾಲೆಯಲ್ಲಿ ಬಾಲಕಿ ಒಂಬತ್ತನೇ ತರಗತಿ ಓದುತ್ತಿದ್ದಳು.

ಮೆಸೇಜ್ ನೋಡಿದ ತಾಯಿ ಕೂಡಲೇ ದಿಗಿಲುಗೊಂಡು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಆದರೆ ಅವರು ಬರುವಷ್ಟರಲ್ಲಿಯೇ ಪೂರ್ವಿಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದಿಂದ ಬಾಲಕಿ ಶವಕ್ಕಾಗಿ ಶೋಧಕಾರ್ಯ ನಡೆದಿದೆ.

ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ, ಆತ್ಮಹತ್ಯೆಗೆ ಏನು ಕಾರಣ ಎಂಬ ಬ‌ಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

See also  ಅಧಿಕಾರಿಗಳಲ್ಲಿ ಕ್ಷಮೆ ಯಾಚಿಸಿದ ಹೆಚ್.ಡಿ.ರೇವಣ್ಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು