News Kannada
Monday, March 27 2023

ಹಾಸನ

ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

Photo Credit :

ಹಾಸನ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಮಾತ್ರವಲ್ಲ, ಮೋದಿಯ ಆ ನಡೆಗೆ ತಮ್ಮ ಖುಷಿಯನ್ನು ವ್ಯಕ್ತಪಡಿಸಿ ಧನ್ಯವಾದವನ್ನೂ ತಿಳಿಸಿದ್ದಾರೆ.

ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದಲ್ಲಿರುವ ಹೊಯ್ಸಳ ವಾಸ್ತುಶಿಲ್ಪದ ದೇವಾಲಯಗಳನ್ನು ಯುನೆಸ್ಕೊ ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರಿಸುವ ಸಂಬಂಧ ನಾಮಾಂಕಿತಗೊಳಿಸಿದ ಹಿನ್ನೆಲೆಯಲ್ಲಿ ಅವರು ಈ ಅಭಿನಂದನೆಯನ್ನು ತಿಳಿಸಿದ್ದಾರೆ.

ಈ ಸಂಬಂಧ ತಮ್ಮ ಸಲಹೆಯನ್ನು ಪ್ರಧಾನಿ ಮೋದಿಯವರು ಸ್ವೀಕರಿಸಿದ್ದು ಖುಷಿ ನೀಡಿದೆ. 1986ರಲ್ಲಿ ಹಂಪೆ, 1987ರಲ್ಲಿ ಪಟ್ಟದಕಲ್ಲು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿದ ಬಳಿಕ ರಾಜ್ಯದ ಯಾವ ಸ್ಥಳವೂ ಮತ್ತೆ ಆ ಪಟ್ಟಿಗೆ ಸೇರಿಲ್ಲ. ಎಲ್ಲವೂ ಅಂದುಕೊಂಡಂತೆಯೇ ಆದರೆ ನನ್ನೂರಿನ ಈ ಅದ್ಭುತ ಸ್ಥಳ 2023ರಲ್ಲಿ ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರಲಿದೆ. ಆ ನಿಟ್ಟಿನಲ್ಲಿ ಕ್ರಮಕೈಗೊಂಡಿದ್ದಕ್ಕೆ ಧನ್ಯವಾದ ಎಂದು ದೇವೇಗೌಡರು ಮೋದಿಯ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

See also  ಹಾಸನ: ಯುವತಿಯನ್ನು ಚುಡಾಯಿಸಿದ ಯುವಕನಿಗೆ ಥಳಿಸಿ ಬೆತ್ತಲೆ ಮೆರವಣಿಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು