ಹಾಸನ: ಲೋಕ್ ಅದಾಲತ್ ಕಕ್ಷಿಗಾರರ ಆಶಾಕಿರಣವಾಗಿದ್ದು ಸೌಹಾ ರ್ದಿತ ಭಾಂದವ್ಯ ವೃದ್ದಿಗೆ ಸಹಕಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತ ಸತ್ರ ನ್ಯಾಯಾಧೀಶರಾದ ಎಲ್.ವಿಜಯ ಲಕ್ಷ್ಮೀದೇವಿ ತಿಳಿಸಿದರು.
ಜಿಲ್ಲಾ ನ್ಯಾಯಾಲಯದಲ್ಲಿನ ಸಭಾಂಗಣದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಮುಂಬರುವ ದಿನಾಂಕ: ೧೧-೦೨-೨೦೨೩ ರಂದು ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ನಡೆಸಲಾಗುತ್ತಿದ್ದು ಏಕಕಾಲಕ್ಕೆ ರಾಜ್ಯ ಹಾಗೂ ಜಿಲ್ಲಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲೂ ನಡೆಸಲಾಗುತ್ತಿದೆ.
ಲೋಕ್ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಲಘು ಕ್ರಿಮಿನಲ್ ಪ್ರಕರಣಗಳು, ಕೌಟುಂಬಿಕ ಪ್ರಕರಣಗಳು, ಸಿವಿಲ್ ವ್ಯಾಜ್ಯಗಳು, ಅಮಲ್ಜಾರಿ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು , ಭೂ ಸ್ವಾಧೀನ ಪ್ರಕರಣಗಳು , ಹಣ ವಸೂಲಾತಿ ಪ್ರಕರಣಗಳು , ಅದಲ್ಲದೆ ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿ ಪ್ರಕರಣಗಳು, ಕಂದಾಯ ಪ್ರಕರಣಗಳು, ನೀರಿನ ಕರ ವಸೂಲಾತಿ ಪ್ರಕರಣಗಳು, ವಿದ್ಯುತ್ ಅದಾಲತ್ ಪ್ರಕರಣಗಳು ಇತ್ಯಾದಿ ಪ್ರಕರಣಗಳನ್ನು ಕಕ್ಷಿಗಾರರು ವಕೀಲರ ಮೂಲಕ ಅಥವಾ ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗುವ ಮೂಲಕ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹು ದಾಗಿದೆ ಇದರಿಂದ ಹಣ ಮತ್ತು ಸಮಯ ಉಳಿತಾಯವಾಗಲಿದ್ದು ಕಕ್ಷಿಗಾರರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಬಿ.ಕೆ.ರವಿಕಾಂತ ಉಪಸ್ಥಿತರಿದ್ದರು.