ಹಾಸನ: ನಗರದ ಹಾಸ ನಾಂಬ ದೇವಾಲಯದಲ್ಲಿ ಇಂದು ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿಗೆ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಎಚ್.ಪಿ.ಸ್ವರೂಪ್ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೈಗೊಂಡಿರುವ ಪಂಚರತ್ನ ಯಾತ್ರೆ ಯಶಸ್ವಿಯಾಗಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ದೇವರಲ್ಲಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಈಗಾಗಲೇ ಗ್ರಾಮೀಣ ಪ್ರದೇಶದಲ್ಲಿ ಪ್ರಚಾರ ಮುಗಿಸಿ ನಗರ ಪ್ರದೇಶದಲ್ಲಿ ಪ್ರಚಾರ ಆರಂಭಿಸಿದ್ದು, ಪಂಚರತ್ನ ಯಾತ್ರೆ ಹಾಗೂ ಯಾತ್ರೆಯಲ್ಲಿ ಅಳವಡಿಸಿಕೊಂಡಿರುವ ೫ ಅಂಶಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲು ಶ್ರಮ ವಹಿಸಲಾಗುತ್ತಿದೆ ಎಂದರು.
ಟಿಕೆಟ್ ವಿಚಾರ: ಟಿಕೆಟ್ ಘೋಷಣೆ ಅಂತಿಮವಾಗಿ ವರಿಸ್ಟರ ತೀರ್ಮಾನವಾಗಿದೆ, ಅದರ ಬಗ್ಗೆ ಕುಮಾರಸ್ವಾಮಿ ಹಾಗೂ ರೇವಣ್ಣ ಕುಳಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದು ಶೀಗ್ರ ವಾಗಿ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲಿದ್ದೇವೆ. ಚುನಾವಣೆ ಸಮೀಪ ಇರುವ ಕಾರಣ ಪ್ರಚಾರಕ್ಕೆ ಕಡಿಮೆ ಸಮಯ ಇರುವ ಕಾರಣ ಪಕ್ಷ ಸಂಘಟನೆ ಗೆ ತಾವು ಕೆಲಸ ಮಾಡುತ್ತಿದ್ದು, ನನ್ನ ಹಾಗೂ ತಮ್ಮ ತಂದೆಯ ಮೇಲೆ ಜನರು ಇಟ್ಟಿರುವ ಪ್ರೀತಿ ವಿಶ್ವಾಸ ಪಕ್ಷ ಸಂಘಟನೆಗೆ ಸಹಕಾರಿಯಾಗಿದೆ ಎಂದು ಹೇಳಿದರು.