ಹಾಸನ: ಪರವಾನಿಗೆ ಪಡೆಯದೇ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದ ಮನೆಗಳ ಮೇಲೆ ಸೆಸ್ಕ್ ಜಾಗೃತಿ ದಳ ದಾಳಿ ಮಾಡಿ ಅಕ್ರಮ ಸಂಪರ್ಕ ಪಡೆದವರ ಮೇಲೆ ಪ್ರಕರಣ ದಾಖಲು ಮಾಡಿದೆ. ಮೈಸೂರು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವಸ್ವಾಮಿ, ಮೈಸೂರು ಸೆಸ್ಕ್ ಜಾಗೃತದಳದ ಪೊಲೀಸ್ ಅಧೀಕ್ಷಕ ರೂಪರಡ್ಡಿ, ಸೆಸ್ಕ್ ಹಾಸನ ವೃತ್ತ ಅಧೀಕ್ಷಕ ಇಂಜಿನಿಯರ್ ಸುನೀಲ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ವಿವಿಧ ಜಿಲ್ಲೆಗಳಲ್ಲಿ ದಾಳಿ: ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರದ ಮತ್ತು ಮಡಿಕೇರಿ ಸೆಸ್ಕ್, ಜಾಗೃತದಳದ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನಲ್ಲಿ ಏಕಕಾಲದಲ್ಲಿ ದಾಳಿ ಮಾಡಿ ಅನಧಿಕೃತ ವಿದ್ಯುತ್ ಸಂಪರ್ಕ ಪಡೆದ ಆರೋಪಿಗಳ ವಿರುದ್ಧ ಹಾಸನ ಸೆಸ್ಕ್ ಜಾಗೃತದಳ ಪೊಲೀಸ್ ಠಾಣೆಯಲ್ಲಿ ವಿದ್ಯುತ್ ಕಳ್ಳತನ ಪ್ರಕರಣಗಳನ್ನು ದಾಖಲು ಮಾಡಲಾಗಿದೆ.