News Kannada
Wednesday, October 04 2023
ಹಾಸನ

ವಿಧಾನಸಭೆ ಚುನಾವಣೆ: ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಘೋಷಣೆ

Assembly elections 2019: Congress announces names of candidates for two constituencies
Photo Credit : News Kannada

ಹಾಸನ: ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ ಹಾಸನ ಜಿಲ್ಲೆಯ ೭ ವಿಧಾನಸಭಾ ಕ್ಷೇತ್ರಗಳ ಪೈಕಿ ಎರಡು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಎಐಸಿಸಿ ಯಿಂದ ಘೋಷಣೆ ಮಾಡಲಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ ಮುರಳಿ ಮೋಹನ್ ಹಾಗೂ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ಶ್ರೇಯಸ್ ಪಟೇಲ್ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಿದೆ.

ಹೊಳೆನರಸಿಪುರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಜಿ ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್ ಅವರು ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕಳೆದ ಬಾರಿ ಕಾಂಗ್ರೆಸ್ ಮುಖಂಡರಾದ ಬಾಗೂರು ಮಂಜೇಗೌಡ ೫೦,೦೦೦ಕ್ಕೂ ಹೆಚ್ಚು ಮತಗಳನ್ನು ಪಡೆದು ಪರಾಭವ ಹೊಂದಿದ್ದರು. ಆದರೆ ಈ ಬಾರಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಲವು ದಶಕಗಳ ಬಳಿಕ ತನ್ನ ಖಾತೆಯನ್ನು ತೆರೆಯುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದು ಚುನಾವಣೆ ಹಿನ್ನೆಲೆಯಲ್ಲಿ ಹಾಸನ ಉಸ್ತುವಾರಿ ವಹಿಸಿಕೊಂಡಿರುವ ಡಿ.ಕೆ ಸುರೇಶ್ ಅವರು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ.

ಇನ್ನು ಸಕಲೇಶಪುರ ಮೀಸಲು ಕ್ಷೇತ್ರದಿಂದ ಹೊಸ ಮುಖ ಎಂದೆ ಬಿಂಬಿತವಾಗಿರುವ ಮುರಳಿ ಮೋಹನ್ ಅವರನ್ನು ಆಯ್ಕೆ ಮಾಡುವ ಮೂಲಕ ಎಐಸಿಸಿ ಅಚ್ಚರಿ ಮೂಡಿಸಿದೆ.

ಈ ಬಾರಿಯೂ ಹೊಸಬರಿಗೆ ಮಣೆ ಹಾಕಿರುವ ಕಾಂಗ್ರೆಸ್ ಪಕ್ಷ ಹಾಲಿ, ಜೆಡಿಎಸ್ ಶಾಸಕ ಹಾಗೂ ಸತತ ಗೆಲುವಿನ ಮೂಲಕ ವಿಶ್ವಾಸದಲ್ಲಿರುವ ಎಚ್ ಕೆ ಕುಮಾರಸ್ವಾಮಿ ಅವರ ವಿರುದ್ಧ ಯಾವ ರಣತಂತ್ರ ಹೆಣೆಯಲಿದೆ ಹಾಗೂ ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಿದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ಪಕ್ಷ ಪ್ರತಿ ಚುನಾವಣೆಯಲ್ಲಿಯೂ ಒಗ್ಗಟ್ಟು ಪ್ರದರ್ಶನ ಮಾಡದೆ ಒಳ ಜಗಳದಿಂದಲೇ ಹಿನ್ನಡೆ ಅನುಭವಿಸುತ್ತಿದ್ದು ಈ ಬಾರಿಯ ಚುನಾವಣೆಯಲ್ಲಿ ಯಾವ ರೀತಿ ತಮ್ಮ ಅಸ್ತಿತ್ವವನ್ನು ಕಾಪಾಡಿಕೊಳ್ಳಲಿದೆ ಎಂಬುದು ಕಾದು ನೋಡಬೇಕಿದೆ .
ಉಳಿದಂತೆ ಐದು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಬೇಕಿದ್ದು ಚುನಾವಣೆ ಸಮೀಪಿಸುತ್ತಿರುವುದರಿಂದ ಅಭ್ಯರ್ಥಿಗಳ ಪಟ್ಟಿಯನ್ನು ಬೇಗ ಬಿಡುಗಡೆ ಮಾಡಿದರೆ ಸಂಘಟನೆಗೆ ಹಾಗೂ ಪಕ್ಷ ಬಲವರ್ಧನೆಗೆ ಹೆಚ್ಚು ನೆರವಾಗಲಿದೆ ಎಂಬ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರುತ್ತಿದೆ.

ಹಾಸನ ಜಿಲ್ಲೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಪಕ್ಷ ಮಾತ್ರ ಎರಡು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡುವ ಮೂಲಕ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದ್ದು ಉಳಿದ ಪಕ್ಷಗಳು ಇನ್ನೂ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿಲ್ಲ. ಕೆಎಂಶಿ, ಎಟಿಆರ್ ಹೆಸರು ಶಿಫಾರಸ್ಸು ಇನ್ನುಳಿದ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಸದ್ಯದಲ್ಲೇ ಘೋಷಣೆಯಾಗಲಿದ್ದು ಕೆಪಿಸಿಸಿಯಿಂದ ಎಐಸಿಸಿಗೆ ನೀಡಿರುವ ಆಕಾಂಕ್ಷಿಗಳ ಪಟ್ಟಿಯಲ್ಲಿ ಅರಕಲಗೂಡು ಕ್ಷೇತ್ರದಿಂದ ಜೆಡಿಎಸ್‌ನ ಹಾಲಿ ಶಾಸಕ ಎ.ಟಿ. ರಾಮಸ್ವಾಮಿ ಹಾಗೂ ಕೃಷ್ಣೇಗೌಡ, ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ, ಶ್ರವಣಬೆಳಗೊಳ ಕ್ಷೇತ್ರದಿಂದ ಮಾಜಿ ಎಂ.ಎಲ್.ಸಿ. ಗೋಪಾಲಸ್ವಾಮಿ, ಬೇಲೂರಿನಿಂದ ಗಂಡಸಿ ಶಿವರಾಂ, ಕೃಷ್ಣೇಗೌಡರವರ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

See also  ಹಾಸನ: ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಶಾಸಕ ರೇವಣ್ಣ ತೊಡಕು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು