ಆಲೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ಕಲ್ಯಾಣಕ್ಕಾಗಿ ರೂಪಿಸಿರುವ ನೂರಾರು ಯೋಜನೆಗಳನ್ನು ಗ್ರಾಮೀಣ ಭಾಗದ ಜನತೆಗೆ ತಲುಪುವಂತೆ ನಿಸ್ವಾರ್ಥ ಸೇವೆಯನ್ನು ಮಾಡುತ್ತಿರುವ ರಾಧಮ್ಮ ಜನಸ್ಪಂದನ ಸಂಸ್ಥಾಪಕ ಹೇಮಂತ್ ಕುಮಾರ್ ಅವರಿಗೆ ಲೋಕಸಭಾ ಸದಸ್ಯ ಹಾಗೂ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ ಬಿದೂರಿ ಅಭಿನಂದನೆ ವ್ಯಕ್ತಪಡಿಸಿದರು.
ಹಾಸನ ಜಿಲ್ಲಾ ಚುನಾವಣಾ ಸಮೀಕ್ಷೆ ಮಾಡಲು ಆಗಮಿಸಿದ್ದ ಲೋಕಸಭಾ ಸದಸ್ಯರ ಗಮನ ಸೆಳೆದ ಹಳ್ಳಿ ಹೈದಾ ಹೇಮಂತ್ ಹಳ್ಳಿಗಾಡಿನಲ್ಲಿ ಸಾಮಾಜಿಕ ಸೇವೆ ಮಾಡಿದ್ದನ್ನು ದಿಲ್ಲಿ ಲೋಕಸಭಾ ಸದಸ್ಯರು ಗುರುತಿಸಿ ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರಮೋದಿಯವರ ಗಮನಕ್ಕೆ ತಂದು ಉತ್ತಮ ಸೇವೆ ಮಾಡಲು ಅವಕಾಶ ಮಾಡಿಕೊಡಲಾಗುವುದು ಎಂದರು.
ರಾಧಮ್ಮ ಜನಸ್ಪಂದನ ಸಂಸ್ಥಾಪಕ ಅಧ್ಯಕ್ಷ ಜನರ ಸೇವೆಯನ್ನು ಮಾಡುವ ಉದ್ದೇಶದಿಂದ ತಮ್ಮದೇಯಾದ ಸಂಸ್ಥೆ ಸ್ಥಾಪಿಸಿಕೊಂಡು ಹಲವಾರು ವರ್ಷಗಳಿಂದ ಆಲೂರು ತಾಲ್ಲೂಕಿನಲ್ಲಿ ತಾಂಡವಾಡುತ್ತಿರುವ ಕಾಡಾನೆ ಸಮಸ್ಯೆಗೆ ಪರಿಹಾರ ನೀಡುವಂತೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ತಾಲ್ಲೂಕು ಕೇಂದ್ರದಲ್ಲಿ ರೈಲು ನಿಲುಗಡೆ ಮಾಡುವಂತೆ ಕೇಂದ್ರ ರೈಲ್ವೆ ಸಚಿವರ ಗಮನಕ್ಕೆ ತರಲಾಗಿದೆ. ಇಷ್ಟು ಸಾಲದೆಂಬಂತೆ ಹಿರಿಯ ನಾಗರಿಕರ ಕಾರ್ಡುಗಳು, ವೃದ್ದಾಪ್ಯ, ವೇತನ, ಅಂಗವಿಕಲ ವೇತನ, ಹಾಗೂ ಜನರಿಗೆ ಸರ್ಕಾರ ಒದಗಿಸುತ್ತಿರುವ ಸೇವೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಪ್ರತಿ ೬ ತಿಂಗಳಿಗೊಮ್ಮೆ ಆರೋಗ್ಯ ಮೇಳ ಆಯೋಜನೆ, ಬಡ ಮಕ್ಕಳ ವಿದ್ಯಾಭ್ಯಾಸ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರೋತ್ಸಾಹ ಧನ ನೀಡುವುದು. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುವುದು ಜನರಿಗೆ ಸಂತಸ ತಂದಿದೆ.