ಹಾಸನ: ಜಿಲ್ಲೆಯ ನೊಂದಾ ಯಿತ ಕಟ್ಟಡ ಮತ್ತು ಇತರ ಕಾರ್ಮಿಕರ ಸಂಘಟನೆಗಳ ಒಕ್ಕೂಟ ದಿಂದ ಹಾಸನ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ವಿ ಸ್ವಾಮಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಸುಮಾರು ೧.೧೦ ಲಕ್ಷ ಕಟ್ಟಡ ನೊಂದಣಿ ಕಾರ್ಮಿಕರು ಇದ್ದು ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ೪೦,೦೦೦ ಮಂದಿ ಕಟ್ಟಡ ಕಾರ್ಮಿಕರು ಇದ್ದಾರೆ.ಮುಂದಿನ ದಿನಗಳಲ್ಲಿ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.
ಚುನಾವಣೆ ಬಂದಂತ ಸಂದ ರ್ಭದಲ್ಲಿ ಮಾತ್ರ ಜನ ಪ್ರತಿನಿಧಿಗಳು ನಮ್ಮ ಬಳಿ ವೋಟನ್ನು ಕೇಳಲು ಬರುತ್ತಾರೆ ಆದರೆ ಕೂಲಿ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ಬಗ್ಗೆ ಯಾರು ಸಹ ಚುನಾವಣೆ ಮುಗಿದ ಬಳಿಕ ಸಮಸ್ಯೆ ಗೆ ಸ್ಪಂದಿಸುವುದಿಲ್ಲ , ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಒದಗಿಸುವ ನಿಟ್ಟಿನಲ್ಲಿ ವಿಫಲರಾಗಿದ್ದಾರೆ.
ಇದರಿಂದ ಸರ್ಕಾರದಿಂದ ಬರುವಂತಹ ಯೋಜನೆಗಳಿಂದ ಅರ್ಹ ಕಾರ್ಮಿಕರ ವಂಚಿತರಾ ಗಿದ್ದು ಮುಂದಿನ ದಿನಗಳಲ್ಲಿ ಕಾರ್ಮಿಕರ ಸಮಸ್ಯೆಗೆ ಸ್ಪಂದಿಸುವಲು ಸ್ಪರ್ಧೆ ಮಾಡುತ್ತಿರುವುದಾಗಿ ಹೇಳಿದರು.
ಕಳೆದ ಮೂರು ದಶಕಗಳಿಂದ ಕಟ್ಟಡ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದು ಜಿಲ್ಲೆಯ ಸುಮಾರು ೧೨ ಸಂಘಟನೆಗಳ ಸದಸ್ಯರು ನನಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಜಣ್ಣ, ಮಂಜೇಗೌಡ, ಪಣಿರಾಜ್, ಮೋಹನ್ ಕುಮಾರ್ ಇತರರು ಇದ್ದರು ಎಂದರು.