ಹಾಸನ: ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಹಾಸನಾಂಬ ದೇಗುಲ ವರ್ಷದಲ್ಲಿ ಕೆಲವೇ ದಿನಗಳು ಮಾತ್ರ ತೆರೆದಿರುತ್ತದೆ. ಈ ನಿಟ್ಟಿನಲ್ಲಿ ದೇಗುಲದಲ್ಲಿ ಭಕ್ತರ ದರ್ಶನ 9ನೇ ದಿನವೂ ಮುಂದುವರೆದಿದ್ದು, ಈ ಅವಧಿಯಲ್ಲಿ ದೇಗುಲದಲ್ಲಿ ಸುಮಾರು 5.52 ಕೋಟಿ ರೂ ಹಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಕಳೆದ ಒಂಬತ್ತು ದಿನಗಳಲ್ಲಿ ದೇವಸ್ಥಾನದ ಆಡಳಿತ ಮಂಡಳಿಯು 1000 ಹಾಗೂ 400 ರೂಪಾಯಿ ಮೌಲ್ಯದ ವಿಶೇಷ ಪ್ರವೇಶ ಚೀಟಿ ಹಾಗೂ ಲಡ್ಡು ಪ್ರಸಾದ ಮಾರಾಟ ಮಾಡಿ 5.52 ಕೋಟಿ ರೂ ಸಂಗ್ರಹಿಸಿದೆ. ಇಂದು ಅಂದರೆ ಮಂಗಳವಾರದವರೆಗೆ ದೇವಸ್ಥಾನ ತೆರೆದಿರುವುದರಿಂದ ಆದಾಯ 6.50 ಕೋಟಿ ದಾಟುವ ಸಾಧ್ಯತೆ ಇದೆ ಎಂದು ಹೇಳಿದೆ.